ಹೆಗಡೆ ಗೆಲುವಿಗೆ ಕುಣಿದು ಕುಪ್ಪಳಿಸಿದ ರೂಪಾಲಿ ನಾಯ್ಕ
ಕಾರವಾರ, ಮೇ 24: ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಗೆಲುವು ಸಾಧಿಸಿದ್ದಕ್ಕಾಗಿ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಕಾರವಾರದಲ್ಲಿ ಇಂದು ಸಂಭ್ರಮಾಚರಣೆ ನಡೆಸಲಾಯಿತು.
ಈ ವೇಳೆ ಶಾಸಕಿಯೂ ಸೇರಿದಂತೆ ಪಕ್ಷದ ಮಹಿಳಾ ಮುಖಂಡರು, ಕಾರ್ಯಕರ್ತರು ಡೋಲಿನ ಶಬ್ದಕ್ಕೆ ಕುಣಿದು ಕುಪ್ಪಳಿಸಿದರು.
ಗ್ರೀನ್ ಸ್ಟ್ರೀಟ್ ನಲ್ಲಿರುವ ಬಿಜೆಪಿ ಕಚೇರಿ ಎದುರು ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದಾಗಿ ಅನಂತಕುಮಾರ ಹೆಗಡೆಯವರು ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ತತ್ವ, ಸಿದ್ಧಾಂತಗಳನ್ನು ಪಾಲಿಸಿಕೊಂಡು ಬಂದಿದೆ. ಇದಕ್ಕಾಗಿ ಜನರು ಬಿಜೆಪಿ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಹೇಳಿದರು.












Click it and Unblock the Notifications