• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಕನ್ನಡ ಜಿಲ್ಲೆಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾ ನೋಟು ವಶ

|
Google Oneindia Kannada News

ಕಾರವಾರ, ಜೂನ್ 2: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ದಾಂಡೇಲಿ ಗ್ರಾಮೀಣ ಪೊಲೀಸರು ಬಂಧಿಸಿ, 4.5 ಲಕ್ಷ ಅಸಲಿ ನೋಟು, 72 ಲಕ್ಷ ರೂ. ಖೋಟಾನೋಟು ವಶಕ್ಕೆ ಪಡೆಯಲಾಗಿದೆ.

ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ್ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45) ಮತ್ತು ಶಿವಾಜಿ ಕಾಂಬ್ಳೆ(52) ಇವರುಗಳನ್ನು ಬಂಧಿಸಲಾಗಿದೆ.

ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ಖೋಟಾನೋಟು ಸಮೇತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ಮಾಡಲಾಗಿದೆ.

 Karwar: Rs.72 Lakhs Fake Currency Found In Dandeli
   Sonu Sood ಈಗ ಕೆಲವರ ಪಾಲಿನ ದೇವರು | Oneindia Kannada

   ಖೋಟಾ ನೋಟು ವ್ಯವಹಾರಕ್ಕೆ ಬಳಸಿದ್ದ ಎರಡು ಕಾರುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದು, ಕರಾವಳಿ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಖೋಟಾನೋಟು ವ್ಯವಹಾರ ಬಯಲಾಗಿದೆ. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   English summary
   Dandeli Rural Police have arrested six people for allegedly fake currency business in Dandeli in Uttara Kannada district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X