• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕಕ್ಕೆ ಆಗಮಿಸುವ ಈ ರಾಜ್ಯದವರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

|

ಕಾರವಾರ, ಮಾರ್ಚ್ 25: ಕೆಲವು ರಾಜ್ಯದಿಂದ ಕರ್ನಾಟಕಕ್ಕೆ ಬರುವವರು ಬಸ್ ಹಾಗೂ ರೈಲಿನಲ್ಲಿ ಪ್ರಯಾಣಿಸಲು ಇನ್ಮುಂದೆ ಆರ್‌ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಈ ಬಗ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಕೊಂಕಣ ರೈಲ್ವೆ ನಿಗಮ ಅಧಿಕೃತ ಆದೇಶ ಹೊರಡಿಸಿದೆ.

ಪ್ರತಿನಿತ್ಯ ವಾಯವ್ಯ ಸಾರಿಗೆಯ ಹಲವು ಬಸ್ಸುಗಳು ಗೋವಾ ಹಾಗೂ ಮಹಾರಾಷ್ಟ್ರಕ್ಕೆ ತೆರಳುತ್ತದೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ಹಲವರು ಗೋವಾಕ್ಕೆ ಬಂದು, ಅಲ್ಲಿಂದ ಕರ್ನಾಟಕದ ಸಾರಿಗೆ ಬಸ್ಸುಗಳಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆನ್ನಲಾಗಿದೆ.

ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿದವರಿಗೆ ಮಾತ್ರ ಉತ್ತರ ಕನ್ನಡ ಜಿಲ್ಲೆಗೆ ಪ್ರವೇಶ

ಹೀಗಾಗಿ ಗೋವಾ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಮಾಡಿಕೊಡಬೇಕು, ಇಲ್ಲದಿದ್ದರೆ ಅವಕಾಶ ಮಾಡಿಕೊಡಬೇಡಿ ಎಂದು ಎನ್‌ಡಬ್ಲುö್ಯಕೆಆರ್‌ಟಿಸಿ ಅಧಿಕಾರಿಗಳು ಆದೇಶಿಸಿದ್ದಾರೆ.

   ದೂರು ನೀಡಲಿ ನಾನು ಫೇಸ್ ಮಾಡೋಕೆ ರೆಡಿ ಇದ್ದೇನೆ | Oneindia Kannada

   ಇನ್ನು ಕೊಂಕಣ ರೈಲ್ವೆಯಲ್ಲಿ ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ಚಂಡೀಗಡ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರಯಾಣಿಸುವವರಿಗೂ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕರ್ನಾಟಕ ಸರ್ಕಾರದ ಆದೇಶದ ಅನ್ವಯ, ರೈಲಿನಲ್ಲಿ ಪ್ರಯಾಣಿಸುವವರ ಸುರಕ್ಷತಾ ದೃಷ್ಟಿಯಿಂದ, ಸೋಂಕು ಹೆಚ್ಚಳಕ್ಕೆ ಆಸ್ಪದ ನೀಡಬಾರದೆಂಬ ಕಾರಣಕ್ಕೆ ಎಂದು ನಿಗಮದಿಂದ ಈ ಆದೇಶ ಮಾಡಲಾಗಿದೆ.

   English summary
   The RT-PCR Negative Report made it mandatory for people coming to Karnataka from some states to travel by bus and train.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X