ಕರಾವಳಿಯಲ್ಲಿ ಮರಳುಗಾರಿಕೆಗೆ ನಿಷೇಧ: ನಿಲ್ಲದ ಅಕ್ರಮ ಮರಳು ಸಾಗಾಟ ದಂಧೆ
ಕಾರವಾರ, ಸೆಪ್ಟೆಂಬರ್, 23: ಜಿಲ್ಲೆಯ ಕರಾವಳಿಯಲ್ಲಿ ಸಿಆರ್‌ಜೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ತಡೆ ಹಾಕಲಾಗಿದ್ದು, ನಿಯಮವನ್ನು ಬಿಗಿ ಮಾಡಲಾಗಿದೆ. ನಿಯಮ ಜಾರಿಯಾದ ಬಳಿಕ ನದಿ ತೀರಗಳಲ್ಲಿ ಮರಳು ತೆಗೆದು ಮಾರಾಟ ಮಾಡದಂತೆ ರಾಷ್ಟ್ರೀಯ ಹಸಿರು ಪೀಠ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಪರಿಣಾಮ ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳಿಗೆ ಮರಳು ಕೊರತೆ ಒಂದೆಡೆ ಆದರೆ, ಮತ್ತೊಂದೆಡೆ ಅನಧಿಕೃತವಾಗಿ ಮರಳನ್ನು ಹೆಚ್ಚಿನ ಬೆಲೆಗೆ ಗೋವಾ ರಾಜ್ಯಗಳಿಗೆ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.
ಸಿಆರ್‌ಜೆಡ್ ವಲಯದಲ್ಲಿ ಮರಳುಗಾರಿಕೆ ಮಾಡುವುದರಿಂದ ಸ್ಥಳೀಯರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಮರಳುಗಾರಿಕೆ ಮಾಫಿಯ ಆಗಿದ್ದು, ಇದನ್ನು ಸ್ಥಗಿತಗೊಳಿಸುವಂತೆ ರಾಷ್ಟ್ರೀಯ ಹಸಿರು ಪೀಠ ಜಿಲ್ಲಾಡಳಿತಕ್ಕೆ ಆದೇಶ ಮಾಡಿತ್ತು. ಸದ್ಯ ಕಳೆದ ನಾಲ್ಕೈದು ತಿಂಗಳಿನಿಂದ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತ ಆಗಿದ್ದು, ಮರಳಿನ ಅಭಾವ ಸಹ ಎದುರಾಗಿದೆ. ಈಗಾಗಲೇ ಮಳೆ ಕಡಿಮೆ ಆಗಿರುವ ಕಾರಣ ಕಟ್ಟಡ ಕಾಮಗಾರಿಗಳು ಪ್ರಾರಂಭವಾಗಿವೆ. ಸಣ್ಣ ಪುಟ್ಟ ದುರಸ್ತಿ ಕಾಮಗಾರಿಗಳಿಗೂ ಮರಳಿನ ಅಭಾವ ಕಾಡತೊಡಗಿದೆ.
ಶಿರಸಿಯಲ್ಲಿ ಉಡ ನುಂಗಲು ಯತ್ನಿಸಿ ವಿಫಲವಾದ ಕಾಳಿಂಗ ಸರ್ಪ
ಹೆಚ್ಚಿದ ಅನಧಿಕೃತ ಮರಳುಗಾರಿಕೆ
ಇನ್ನು ಮರುಗಾರಿಕೆಗೆ ನಿರ್ಬಂಧ ಹೇರಿದ ಬೆನ್ನಲ್ಲೆ ಸದ್ದಿಲ್ಲದೇ ಅಕ್ರಮವಾಗಿ ಮರಳನ್ನು ದಾಸ್ತಾನು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮರಳನ್ನು ಸಾಗಾಟದ ದಂಧೆಯೂ ಸಹ ಜೋರಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅದರಲ್ಲೂ ಕಾಳಿ ನದಿಯಲ್ಲಿ ಈ ಹಿಂದೆ ಮರಳನ್ನು ತೆಗೆಯಲು ಅವಕಾಶ ನೀಡಿದಾಗ, ಹೆಚ್ಚಿನ ಪ್ರಮಾಣದಲ್ಲಿ ಮರಳನ್ನು ತೆಗೆದು ಸಂಗ್ರಹಿಸಿದ್ದರು. ಹೆಚ್ಚಿನ ಮರಳು ಸಂಗ್ರಹ ಮಾಡಿಕೊಂಡವರು ಇದೀಗ ಅದನ್ನು ರಾತ್ರೋರಾತ್ರಿ ಕದ್ದುಮುಚ್ಚಿ ಗೋವಾಕ್ಕೆ ಸಾಗಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇತ್ತೀಚೆಗೆ ಗೋವಾ ಗಡಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದನ್ನು ಕಾರವಾರ ಉಪವಿಭಾಗಾಧಿಕಾರಿ ಸೂಚನೆಯಂತೆ ಹಿಡಿದಿದ್ದರು. ಅಕ್ರಮಕ್ಕೆ ಕಡಿವಾಣ ಹಾಕುವಂತೆ ಸ್ಥಳೀಯರಾದ ಎನ್ ದತ್ತಾ ಅವರು ಆಗ್ರಹಿಸಿದ್ದಾರೆ.

ಯಾವ್ಯಾವ ಪ್ರದೇಶದಲ್ಲಿ ಮರಳುಗಾರಿಕೆಗೆ ಅವಕಾಶ?
ಕಾರವಾರ ತಾಲೂಕಿನ ಕಾಳಿ, ಅಂಕೋಲಾ ತಾಲೂಕಿನ ಗಂಗಾವಳಿ, ಕುಮಟಾ ತಾಲೂಕಿನ ಅಘನಾಶಿನಿ ಹಾಗೂ ಹೊನ್ನಾವರ ತಾಲೂಕಿನ ಶರಾವತಿ ನದಿಯಲ್ಲಿ ಮರಳನ್ನು ತೆಗೆಯಲು ಅವಕಾಶ ನೀಡಲಾಗಿತ್ತು. ಸುಮಾರು 100ಕ್ಕೂ ಅಧಿಕ ಲೀಸ್ ಪಡೆದವರು ಮರಳು ತೆಗೆಯುತ್ತಿದ್ದು, ಸದ್ಯ ಮರಳುಗಾರಿಕೆ ಸ್ಥಗಿತ ಮಾಡಿದ್ದಾರೆ. ಜನರಿಗೆ ಮರಳು ಅವಶ್ಯಕತೆ ಇರುವ ಹಿನ್ನಲೆಯಲ್ಲಿ ಅನಧಿಕೃತವಾಗಿ ಮರಳನ್ನು ತೆಗೆದು ಸಾಗಾಟ ಮಾಡುವ ಕೃತ್ಯಕ್ಕೆ ಇಳಿದಿದ್ದಾರೆ. ಕೆಲವರು ದಂಧೆಯನ್ನೇ ಬಂಡವಾಳ ಮಾಡಿಕೊಂಡು ಪಕ್ಕದ ಗೋವಾ ರಾಜ್ಯಗಳಿಗೂ ಮರಳು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಹೆಚ್ಚಾಗಿ ಈ ದಂಧೆ ನಡೆಯುತ್ತಿದೆ.

ಕಾರವಾರದಲ್ಲಿ ನಿಲ್ಲದ ಮರಳು ದಂಧೆ
ಬೆಳಗಿನ ವೇಳೆಯಲ್ಲಿ ಮರಳನ್ನು ಸಾಗಿಸಿದರೆ ಅಧಿಕಾರಿಗಳು ಹಿಡಿಯುತ್ತಾರೆ ಎಂದು ರಾತ್ರಿ ವೇಳೆ ಸಾಗಾಟ ಮಾಡುವ ಕಾರ್ಯಕ್ಕೆ ಇಳಿದಿದ್ದಾರೆ. ಆದ್ದರಿಂದ ಚೆಕ್ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಈ ಅಕ್ರಮಕ್ಕೆ ಕಡಿವಾಣ ಹಾಕಬಹುದು ಎನ್ನುವುದು ಸಾರ್ವಜನಿಕರ ಅಭಿಪ್ರಾಯ ಆಗಿದೆ. ಸದ್ಯ ಸಿಆರ್‌ಜೆಡ್ ಪ್ರದೇಶದ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಅವಕಾಶ ಇಲ್ಲ. ಆದ್ದರಿಂದ ಈ ವ್ಯಾಪ್ತಿಯನ್ನು ಹೊರತುಪಡಿಸಿ ನದಿ, ಹಳ್ಳ ಕೊಳ್ಳಗಳಲ್ಲಿ ಮರಳು ತೆಗೆಯುತ್ತಿದ್ದಾರೆ. ನಿರ್ಧಿಷ್ಟ ತೆರಿಗೆಯೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿ ಪರವಾನಿಗೆ ಮೂಲಕ ಮರಳು ತೆಗೆಯಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮೋಹನ್ ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications