ದ.ಕನ್ನಡ ಭಾರಿ ಮಳೆ: ಆಗಸ್ಟ್ 11ರಂದು ಶಾಲಾ-ಕಾಲೇಜು ರಜೆ
ದಕ್ಷಿಣ ಕನ್ನಡ, ಆಗಸ್ಟ್ 10: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ (ಆಗಸ್ಟ್ 10) ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಕಾಲುವೆಗಳು ತುಂಬಿ ಹರಿಯುತ್ತಿವೆ, ರಸ್ತೆಗಳೂ ಸಹ ತುಂಬಿವೆ ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಪ್ರಕಟಿಸಿದ್ದು, ಮಳೆಯಿಂದ ಈ ವರೆಗೆ ಯಾವುದೇ ಹಾನಿಯಾಗಿಲ್ಲ ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತಳೆಯಲಾಗಿದೆ ಎಂದಿದ್ದಾರೆ.

ಶನಿವಾರ ಅರ್ಧ ದಿನ ಶಾಲಾ ಕಾಲೇಜುಗಳು ಇರುವ ಕಾರಣ ರಜೆ ಘೋಷಣೆಯಿಂದ ಹೆಚ್ಚಿನ ವ್ಯತ್ಯಾಸವೇನೂ ಆಗದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications