ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ನೇಣಿಗೆ ಶರಣು
ಕಾರವಾರ, ಜೂ.13: ಪಿಯುಸಿ ಅಂತಿಮ ವರ್ಷದ ಪರೀಕ್ಷೆ ರದ್ದಾದ ಕಾರಣದಿಂದಾಗಿ ಮನನೊಂದು ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಶಿರಸಿಯ ಯಡಳ್ಳಿಯಲ್ಲಿ ನಡೆದಿದೆ.
ಧನ್ಯ (18) ಪರೀಕ್ಷೆ ರದ್ದಾದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಧನ್ಯ ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತಿದ್ದಳು.

ವಿದ್ಯಾರ್ಥಿನಿ ಧನ್ಯ ತಾನು ಶಾಲೆಗೆ ಪ್ರಥಮ ರ್‍ಯಾಂಕ್ ಬರಬೇಕು ಎಂಬ ಕನಸನ್ನು ಹೊತ್ತು ಪರೀಕ್ಷೆಗಾಗಿ ಅಧ್ಯಯನ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಆದರೆ ಕೊರೊನಾ ಕಾರಣದಿಂದಾಗಿ ಪರೀಕ್ಷೆಗಳನ್ನು ಸರ್ಕಾರ ರದ್ದು ಮಾಡಿದೆ. ಹಾಗೆಯೇ ಪ್ರಥಮ ಪಿಯುಸಿ ಅಂಕದ ಆಧಾರದಲ್ಲಿ ದ್ವಿತೀಯ ಪಿಯುಸಿ ಅಂಕ ನೀಡಲು ಸರ್ಕಾರ ನಿರ್ಧರಿಸಿದೆ.
ಇದರಿಂದಾಗಿ ತಾನು ವರ್ಷ ಪೂರ್ತಿ ಓದಿದ್ದು ವ್ಯರ್ಥವಾಯಿತು ಎಂದು ಮನನೊಂದು ಹಾಗೂ ಪ್ರಥಮ ಪಿಯುಸಿ ಅಂಕದ ಆಧಾರದಲ್ಲಿ ದ್ವಿತೀಯ ಪಿಯುಸಿ ಅಂಕ ದೊರೆಯಲಿದೆ ಚಿಂತೆಗೆ ವಿದ್ಯಾರ್ಥಿನಿಯು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಈ ಬಗ್ಗೆ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಒನ್‌ಇಂಡಿಯಾ ಸುದ್ದಿ)











Click it and Unblock the Notifications