ಆನ್‌ಲೈನ್ ಪಡಿತರ ತಿದ್ದುಪಡಿಗೆ ಪರಿಪಾಟಲು: ತಿಂಗಳು ಅಲೆದರೂ ಪರಿಹಾರವಾಗದ ಸಮಸ್ಯೆ
ಕಳೆದ ಸುಮಾರು ಒಂದುವರೆ ತಿಂಗಳುಗಳಿಂದ ಇಲಾಖೆಯಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ತಿದ್ದುಪಡಿ ಅರ್ಜಿ ವಿಲೇವಾರಿಯಾಗದೆ ಜನರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯಿಂದ ಕಾರಾವಾರ ತಾಲೂಕಿನ ಸಾರ್ವಜನಿಕರು ಹೈರಾಣಾಗಿದ್ದಾರೆ.
ಕಾರವಾರ, ಫೆಬ್ರವರಿ 25: ಸರ್ಕಾರಿ ಸೇವೆಗಳು ತ್ವರಿತಗತಿಯಲ್ಲಿ ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಆನ್‌ಲೈನ್ ಸೇವೆ ಆರಂಭಿಸಿದೆ. ಆದರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿನ ಜಿಎಸ್‌ಸಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ತಿದ್ದುಪಡಿಗೆ ತಿಂಗಳುಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ, ಹೆಸರು ತೆಗೆಯುವುದು, ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ, ನ್ಯಾಯಬೆಲೆ ಅಂಗಡಿ ಬದಲಾವಣೆ ಸೇರಿದಂತೆ ಇತ್ಯಾದಿ ಸೇವೆಯನ್ನು ಪಡೆಯಲು ಕಾರವಾರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿತ್ಯವೂ ಅರ್ಜಿ ಸಲ್ಲಿಸಲಾಗುತ್ತಿದೆ. ಆದರೆ ಕಳೆದ ಸುಮಾರು ಒಂದುವರೆ ತಿಂಗಳುಗಳಿಂದ ಇಲಾಖೆಯಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ವಿಲೇವಾರಿಯಾಗದೆ ಜನರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕಾರವಾರ ತಹಶೀಲ್ದಾರರ ಕಚೇರಿಯಲ್ಲಿ ಸುಮಾರು 400 ಕ್ಕೂ ಹೆಚ್ಚು ಅರ್ಜಿಗಳು ಸರ್ವರ್ ಸಮಸ್ಯೆಯಿಂದಾಗಿ ವಿಲೇವಾರಿಯಾಗದೆ ಬಾಕಿ ಉಳಿದುಕೊಂಡಿದೆ. ಅಲ್ಲದೆ ನಿತ್ಯ 50ಕ್ಕೂ ಹೆಚ್ಚು ಜನರು ತಿದ್ದುಪಡಿಗಾಗಿ ಕಾದು ಸುಸ್ತಾಗಿ ವಾಪಸ್ ತೆರಳುತ್ತಿದ್ದಾರೆ. ಇನ್ನು ಕೆಲವರು ವೈದ್ಯಕೀಯ ಚಿಕಿತ್ಸೆಗೆ, ಹೆರಿಗೆ ಸೇರಿದಂತೆ ಇನ್ನಿತರ ಕಾರಣಕ್ಕೆ ಹೆಸರು ಸೇರ್ಪಡೆ ಮಾಡಿ ತುರ್ತು ಸೌಲಭ್ಯಕ್ಕಾಗಿ ಕಾಯುತ್ತಿರುವವರು ಕಚೇರಿಗೆ ಅಲೆದು ಸುಸ್ತಾಗುವಂತಾಗಿದೆ.
"ತಿಂಗಳ ಹಿಂದೆ ಬಿಪಿಎಲ್ ಕಾರ್ಡ್‌ಗೆ ಹೆಸರು ಸೇರ್ಪಡೆ ಮಾಡಲು ಆನ್‌ಲೈನ್ ಅರ್ಜಿ ಸಲ್ಲಿಕೆ ಮಾಡಿದ್ದೇನೆ. ಆದರೆ ಹೆಸರು ಸೇರ್ಪಡೆಗೆ ತಹಶೀಲ್ದಾರ್ ಕಚೇರಿಗೆ ಮೂರು ಬಾರಿ ಬಂದರೂ ನೆಟ್ವರ್ಕ್ ಸಮಸ್ಯೆ ಎಂದು ವಾಪಸ್ಸ್ ಕಳುಹಿಸಿದ್ದಾರೆ. ದುಡಿದು ತಿನ್ನುವ ನಮಗೆ ಇಷ್ಟು ಸಣ್ಣ ಕೆಲಸಕ್ಕೆ ಹೀಗೆ ಅಲೆದಾಡಿಸಿದರೆ ಹೇಗೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಕ್ರಮವಹಿಸಿ ತಕ್ಷಣ ಹೆಸರು ಸೇರ್ಪಡೆ ಮಾಡಬೇಕು" ಎಂದು ಸ್ಥಳೀಯರಾದ ದೇವಿದಾಸ್ ವೈಂಗಣಕರ್ ಆಗ್ರಹಿಸಿದ್ದಾರೆ.

ಇನ್ನು ಸಕಾಲದಲ್ಲಿ ಅರ್ಜಿ ವಿಲೇವಾರಿಗೆ ಎನ್ಐಸಿ ಸಂಸ್ಥೆ ಕೇವಲ ಎರಡು ಗಂಟೆ ಮಾತ್ರ ನೀಡುತ್ತಿದ್ದು, ಏಕಕಾಲದಲ್ಲಿ ರಾಜ್ಯದಾದ್ಯಂತ ಎಲ್ಲರೂ ಕೆಲಸ ಮಾಡುವ ಕಾರಣ ಸಮಸ್ಯೆಯಾಗುತ್ತಿದೆ ಎನ್ನಲಾಗಿದೆ. ಇದರಿಂದ ನಿತ್ಯ ಒಂದರಿಂದ ಎರಡು ಅರ್ಜಿ ಮಾತ್ರ ವಿಲೇವಾರಿ ಮಾಡಲು ಸಾಧ್ಯವಾಗಿದೆ. ಆದರೆ ಈ ಬಗ್ಗೆ ಜನರಿಗೆ ತಿಳಿಸಿದರು ಅರ್ಥವಾಗದೆ ಜನ ನಮ್ಮೊಂದಿಗೆ ಜಗಳವಾಡುತ್ತಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಹಶೀಲ್ದಾರ್ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
ಇನ್ನು ಪಡಿತರ ಚೀಟಿ ಆನ್‌ಲೈನ್ ವ್ಯವಸ್ಥೆಯನ್ನು ಎನ್‌ಐಸಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ ಕಾರಣ ಕೆಲ ಗಂಟೆಗಳು ಮಾತ್ರ ಕೆಲಸಕ್ಕೆ ಅವಕಾಶ ನೀಡಿತ್ತು. ಇದರಿಂದ ಕೆಲವೇ ಅರ್ಜಿಗಳು ಮಾತ್ರ ವಿಲೇವಾರಿಯಾಗಿದೆ. ಆದರೆ ಈಗಾಗಲೇ ಜನಸಾಮಾನ್ಯರಿಂದ ಪಡೆದ ಅರ್ಜಿಗಳನ್ನು ಇನ್ನೊಂದು ವಾರದಲ್ಲಿ ಎಲ್ಲ ವಿಲೇವಾರಿ ಮಾಡಿ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಕಾರವಾರ ಗ್ರೆಡ್ 2 ತಹಶೀಲ್ದಾರ್ ಶ್ರೀದೇವಿ ಭಟ್ ತಿಳಿಸಿದ್ದಾರೆ.
ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ ಸೇರಿದಂತೆ ಇತರೆ ಸಮಸ್ಯೆಗಳಿರುವುದು ಗಮನಕ್ಕೆ ಬಂದಿತ್ತು. ಆದರೆ ಆನ್‌ಲೈನ್ ಸೇವೆಯ ಗುತ್ತಿಗೆ ಪಡೆದಿದ್ದ ಎನ್‌ಐಸಿ ಸಂಸ್ಥೆ ಸರ್ವರ್ ನಿರ್ವಹಣೆ ಮಾಡುತ್ತಿದ್ದ ಕಾರಣ ಈ ಸಮಸ್ಯೆ ಎದುರಾಗಿತ್ತು. ಇದೀಗ ಕಂಪೆನಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಆನ್‌ಲೈನ್ ಸೇವೆಗೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥ ಮಾಡಲಾಗುವುದು ಎಂದು ಕಾರವಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ತಿಳಿಸಿದ್ದಾರೆ.
ಒಟ್ಟಾರೆ ಆಗಾಗ ಕೈಗೊಡುವ ಆನ್‌ಲೈನ್ ಸೇವೆ ಸಮಸ್ಯೆಯಿಂದಾಗಿ ಜನಸಾಮಾನ್ಯರು ಹೈರಾಣಾಗುವಂತಾಗಿದೆ. ಸಣ್ಣ ಕೆಲಸಕ್ಕೆ ಮೂರ್ನಾಲ್ಕು ದಿನ ಕಚೇರಿ ಅಲೆಯುವ ಸ್ಥಿತಿ ನಿರ್ಮಾಣವಾಗುತ್ತಿದ್ದು, ಸರ್ಕಾರ ಇಂತಹ ಸಮಸ್ಯೆ ಬಗ್ಗೆ ಹೆಚ್ಚಿನ ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರವಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications