Shiroor Landslide: ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರ ಭೇಟಿ
ಕಾರವಾರ, ಸೆಪ್ಟೆಂಬರ್ 24: ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಿಂದ ಲಾರಿ ಸಮೇತರಾಗಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಜುಲೈ 16ರಂದು ಭಾರೀ ಮಳೆಯ ಕಾರಣ ಗುಡ್ಡ ಕುಸಿತವಾಗಿದ್ದು, 9ಕ್ಕೂ ಅಧಿಕ ಜನರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅರ್ಜುನ್ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ. ಲಾರಿ ಚಾಲಕನ ಕುಟುಂಬದವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರು, ಉತ್ತರ ಕನ್ನಡ ಎಸ್‌ಪಿ ಜೊತೆ ಮಾತುಕತೆಯನ್ನು ನಡೆಸಿದರು.
ಶನಿವಾರ ಕಾರ್ಯಾಚರಣೆ ನಡೆಸುವಾಗ ಅರ್ಜುನ್‌ಗೆ ಸೇರಿದ ಲಾರಿ ಪತ್ತೆಯಾಗಿತ್ತು. ಲಾರಿಯ ಕೆಲವು ಬಿಡಿ ಭಾಗವನ್ನು ಸಹ ಗಂಗಾವಳಿ ನದಿಯಿಂದ ಹೊರತೆಗೆಯಲಾಗಿತ್ತು. ಆದ್ದರಿಂದ ಸೋಮವಾರ ಅರ್ಜುನ್ ಕುಟುಂಬದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಕುರಿತು ಮಾಹಿತಿಯನ್ನು ಪಡೆದರು.

ಇದುವರೆಗಿನ ಕಾರ್ಯಾಚರಣೆ ವೇಳೆ ಲಾರಿ ಚಾಲಕ ಅರ್ಜುನ್ ಬಗ್ಗೆ ಮಾತ್ರ ಯಾವುದೇ ಮಾಹಿತಿ ಸಿಕ್ಕಿಲ್ಲ. ಗುಡ್ಡ ಕುಸಿದು ಬಿದ್ದ ಮಣ್ಣಿನ ಜೊತೆ ಲಾರಿಯ ಸಮೇತ ಚಾಲಕ ಅರ್ಜುನ್ ಗಂಗಾವಳಿ ನದಿಗೆ ಬಿದ್ದಿದ್ದಾರೆ. ಗಂಗಾವಳಿ ನದಿಯಲ್ಲಿ ಈಗ ನೀರಿನ ಮಟ್ಟ ಕಡಿಮೆಯಾಗಿದ್ದು, ಮತ್ತೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈಶ್ವರ ಮಲ್ಪೆ ನೇತೃತ್ವದ ಮುಳುಗು ತಜ್ಞರ ತಂಡ ಶನಿವಾರ ಅರ್ಜುನ್‌ಗೆ ಸೇರಿದ ಲಾರಿಯ ಅವಶೇಷಗಳನ್ನು ಪತ್ತೆ ಹಚ್ಚಿತ್ತು. ಈಗ ಕಾರ್ಯಾಚರಣೆಗಾಗಿಯೇ ಗೋವಾದಿಂದ ಬೃಹತ್ ಬಾರ್ಜ್ ಸಹಿತ ಡ್ರಜ್ಜಿಂಗ್ ಮಷಿನ್ ಮತ್ತು ಈಜುಗಾರರನ್ನು ಕರೆಸಲಾಗಿದೆ. ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾದವರ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ.
ಎಸ್‌ಪಿ ಮಾಹಿತಿ: ಉತ್ತರ ಕನ್ನಡ ಎಸ್‌ಪಿ ಅರ್ಜುನ್ ಕುಟುಂಬಸ್ಥರ ಭೇಟಿ ಕುರಿತು ಮಾಹಿತಿ ನೀಡಿದ್ದು, 'ಶಿರೂರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿದ್ದ ಅರ್ಜುನನ ಕುಟುಂಬದವರಿಗೆ ಸಾಂತ್ವನ ಹೇಳಿ, ಮೇಜರ್ ಇಂದ್ರಬಾಲನರವರೊಂದಿಗೆ ನಾಳಿನ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಸಲಾಯಿತು. ಈ ವೇಳೆಗೆ ಮಾನ್ಯ ಶಾಸಕರು ಉಪಸ್ಥಿತರಿದ್ದರು' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಕುರಿತು ಪೊಲೀಸರು ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ಕಾರ್ಯಾಚರಣೆಯಲ್ಲಿಈಶ್ವರ್ ಮಲ್ಪೆ ಅವರು ತನಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ದೂರಿ ವಿಡಿಯೋ ಅಪ್ಲೋಡ್ ಮಾಡಿದ್ದರು. ಆದ್ದರಿಂದ ಈ ಕುರಿತು ಸ್ಪಷ್ಟೀಕರಣ ನೀಡಲಾಗಿದೆ.
ತಮ್ಮ ಸ್ಪಷ್ಟನೆಯಲ್ಲಿ ಪೊಲೀಸರು, ಶಿರೂರು ಗುಡ್ಡ ಕುಸಿತದ ಮೊದಲ ಹಂತದ ಕಾರ್ಯಾಚರಣೆಯಲ್ಲಿ ಈಶ್ವರ್ ಮಲ್ಪೆ ಅವರು ಗಂಗಾವಳಿ ನದಿಯಲ್ಲಿ ಕಾಣೆಯಾದವರ ಶೋಧ ಕಾರ್ಯಾಚರಣೆಗೆ ಸ್ವಯಂ ಪ್ರೇರಿತವಾಗಿ ಬಂದಿದ್ದು, ಈ ವೇಳೆ ಜಿಲ್ಲಾಡಳಿತವು ತಂಡಕ್ಕೆ ಊಟ, ವಸತಿ ವ್ಯವಸ್ಥೆಯೊಂದಿಗೆ ಕಾರ್ಯಾಚರಣೆಗೆ ಅವಕಾಶ ಮಾಡಿಕೊಡಲಾಗಿರುತ್ತದೆ. ಇದಕ್ಕಾಗಿ ಈಶ್ವರ್ ಮಲ್ಪೆ ಅವರು ಜಿಲ್ಲಾಡಳಿತದ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದು ಇರುತ್ತದೆ.
ತದ ನಂತರ ಅತಿಯಾದ ಮಳೆಯಿಂದಾಗಿ ಕಾರ್ಯಚರಣೆ ಸ್ಥಗಿತವಾಗಿರುತ್ತದೆ. ಪ್ರಸ್ತುತ ಮೂರನೇ ಹಂತದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಜಿಲ್ಲಾಡಳಿತ ಅಧಿಕೃತವಾದ ಒಪ್ಪಂದದ ಮೇರೆಗೆ ಗೋವಾದಿಂದ ಡ್ರೆಜಿಂಗ್ ಬಾರ್ಜ್ ಮಷೀನ್ ಹಾಗೂ ವಿಶೇಷ ಈಜುಗಾರರನ್ನು ಕರೆತಂದಿದ್ದು, ಕಾರ್ಯಾಚರಣೆ ಪ್ರಾರಂಭಿಸಿ ಈಗಾಗಲೇ ಗ್ಯಾಸ್ ಟ್ಯಾಂಕರ್ ಲಾರಿಯ 06 ಟೈರ್‌ಗಳು, ಇಂಜಿನ್ ಬಿಡಿ ಭಾಗಗಳು ದೊರೆತಿರುತ್ತವೆ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಈ ಮೂರನೇ ಹಂತದ ಕಾರ್ಯಾಚರಣೆಯಲ್ಲಿ ಈಶ್ವರ ಮಲ್ಪೆ ತಂಡ ಸ್ವಯಂ ಪ್ರೇರಿತವಾಗಿ ಬಂದಿದ್ದು, ತಮಗೆ ಸಹಕಾರ, ಊಟ, ವಸತಿ, ಸಹಾಯಧನದ ಬಗ್ಗೆ ಜಿಲ್ಲಾಡಳಿತಕ್ಕೆ ಯಾವುದೇ ಅಧಿಕೃತ ಮನವಿಯನ್ನೂ ನೀಡಿರುವುದಿಲ್ಲ ಹಾಗೂ ಶೋಧ ಕಾರ್ಯಾಚರಣೆಯ ಮುಖ್ಯಸ್ಥರಿಗೂ ಸಹ ಯಾವುದೇ ಮಾಹಿತಿ ನೀಡಿರುವುದಿಲ್ಲ.
ನಂತರದಲ್ಲಿ ಈಶ್ವರ್ ಮಲ್ಪೆಯವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಯಾವುದೇ ಸಹಕಾರ ಇಲ್ಲ ಎಂದು ಆರೋಪಿಸಿ ಕಾರ್ಯಾಚರಣೆಯ ಸ್ಥಳದಿಂದ ವಿಡಿಯೋ ಮಾಡಿ, ಅಪ್ಲೋಡ್ ಮಾಡಿ, ಸ್ವಯಂಪ್ರೇರಿತವಾಗಿ ತೆರಳಿರುತ್ತಾರೆ ಎಂದು ಪೊಲೀಸರು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ












Click it and Unblock the Notifications