ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವ್ಯಕ್ತಿಚಿತ್ರ: ಎಪಿಎಂಸಿಯಿಂದ ಸಚಿವ ಸ್ಥಾನದತ್ತ ಶಿವರಾಮ ಹೆಬ್ಬಾರ್ ಹೆಜ್ಜೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಆಗಸ್ಟ್ 04: ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತಿಮ ಹಂತಕ್ಕೆ ತಲುಪಿದೆ. ಇಂದು (ಆ.4) ಮಧ್ಯಾಹ್ನ 2.30ಕ್ಕೆ ನೂತನ ಸಚಿವರುಗಳು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಒಟ್ಟು 29 ಶಾಸಕರುಗಳಿಗೆ ಮೊದಲ ಹಂತದಲ್ಲಿ ಸಚಿವರಾಗಲು ಹೈಕಮಾಂಡ್ ಅನುಮತಿ ನೀಡಿದ್ದು, ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾರನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು.

ಇನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಸಚಿವರಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಸಚಿವರಾಗಿದ್ದರು. ಈಗ ಮತ್ತೊಮ್ಮೆ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಸಂಪುಟ ವಿಸ್ತರಣೆ; ಸಚಿವ ಸ್ಥಾನ ಕೈತಪ್ಪಿದ ಶಾಸಕರ ಸ್ಟೇಟಸ್‌ಗಳುಸಂಪುಟ ವಿಸ್ತರಣೆ; ಸಚಿವ ಸ್ಥಾನ ಕೈತಪ್ಪಿದ ಶಾಸಕರ ಸ್ಟೇಟಸ್‌ಗಳು

ಯಡಿಯೂರಪ್ಪ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದ ವೇಳೆ ರಾಜ್ಯಾದ್ಯಂತ ತಿರುಗಾಟ ನಡೆಸಿ, ಉತ್ತಮವಾಗಿ ಕೆಲಸವನ್ನು ನಿರ್ವಹಿಸುವ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದರಿಂದ ಹೆಬ್ಬಾರ್‌ರಿಗೆ ಸಚಿವ ಸ್ಥಾನ ಸಿಕ್ಕಿದೆ. ಈ ಬಗ್ಗೆ ಖುದ್ದು ಹೆಬ್ಬಾರ್ ಕೂಡ ಅಭಿಪ್ರಾಯ ವ್ಯಕ್ತಪಡಿಸಿ, ಸಂತಸ ಹಂಚಿಕೊಂಡಿದ್ದಾರೆ.

Shivaram Hebbar Biography: Age, Education, Family, Political Carrer, Assets and Net Worth

ವ್ಯಕ್ತಿ ಪರಿಚಯ
ನೂತನ ಸಚಿವ ಶಿವರಾಮ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಗ್ರಾಮದಲ್ಲಿ ಜೂನ್ 4, 1957ರಲ್ಲಿ ಜನಿಸಿದರು.

ರಾಜಕೀಯ ರಂಗದಲ್ಲಿನ ಪ್ರಮುಖ ಘಟ್ಟಗಳು
• 1983ರಲ್ಲಿ ಪ್ರಥಮವಾಗಿ ಯಲ್ಲಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಆಯ್ಕೆ,

• ಯಲ್ಲಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಕೆ.

• ಉತ್ತರಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಕೆ.

• 2013ರಲ್ಲಿ ಪ್ರಥಮವಾಗಿ ಯಲ್ಲಾಪುರ ವಿಧಾನಸಭಾ ಮತಕ್ಷೇತ್ರದಿಂದ ಆಯ್ಕೆ

• 2018ರಲ್ಲಿ ಪುನಃ ಶಾಸಕರಾಗಿ ವಿಧಾನಸಭೆಗೆ ಮರು ಆಯ್ಕೆ

• ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಕೆ.

• 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಮೂರನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಬಹುಮತದಿಂದ ಆಯ್ಕೆ.

• 6ನೇ ಫೆಬ್ರವರಿ 2020ರಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಹಾಗೂ ಕಾರ್ಮಿಕ ಹಾಗೂ ಸಕ್ಕರೆ ಸಚಿವರಾಗಿ ಕಾರ್ಯ ನಿರ್ವಹಣೆ.

• ಕೃಷಿ ಮತ್ತು ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ.

• ಕರ್ನಾಟಕ ರಾಜ್ಯ ಸಹಕಾರಿ (ಅಪೆಕ್ಸ್) ಬ್ಯಾಂಕ್‌ನ ನಿರ್ದೇಶಕರಾಗಿ ನಿರ್ವಹಣೆ.

• ಪ್ರಸ್ತುತ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ (ಕೆಡಿಸಿಸಿ), ಉತ್ತರ ಕನ್ನಡ ಜಿಲ್ಲೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ,

• ಶಿವರಾಮ ಹೆಬ್ಬಾರ್ ರಾಜಕೀಯ ಕ್ಷೇತ್ರವಲ್ಲದೇ ಉದ್ಯಮ ಕ್ಷೇತ್ರದಲ್ಲಿಯೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಯಶಸ್ವಿ ಉದ್ಯಮಿಯಾಗಿದ್ದು, ಈ ಮೂಲಕ ಹಲವಾರು ಜನರಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.

ಶಿವರಾಮ ಹೆಬ್ಬಾರ್ ಮಾತು
"ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಈಗಷ್ಟೇ ದೂರವಾಣಿ ಮೂಲಕವಾಗಿ ಕರೆ ಮಾಡಿ ನನಗೆ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಆಹ್ವಾನಿಸಿರುವುದನ್ನು ನಿಮ್ಮ ಮುಂದೆ ಹಂಚಿಕೊಳ್ಳುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ.''

"ಕಳೆದ 1 ವರ್ಷ 5 ತಿಂಗಳ ಕಾಲ ರಾಜ್ಯದ ಕಾರ್ಮಿಕ ಖಾತೆ ಸಚಿವನಾಗಿ ಪಕ್ಷ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಕೊಟ್ಟ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿ, ರಾಜ್ಯಾದ್ಯಂತ ಪ್ರವಾಸ ಮಾಡಿ ಶ್ರಮಿಕ ವರ್ಗಗಳ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದೆ, ನನಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದೇನೆ ಮುಂದೆಯೂ ಸಹ ಕ್ಷೇತ್ರದ, ರಾಜ್ಯದ ಜನತೆಗೆ ಯಾವುದೇ ಚ್ಯುತಿ ಬರದಂತೆ ಕಾರ್ಯನಿರ್ವಹಿಸುತ್ತೆನೆ.''

Recommended Video

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಮತ್ತು ಕಚೇರಿ ಮೇಲೆ ಐಟಿ ದಾಳಿ | Oneindia Kannada

"ನನಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಲು ಮೂಲ ಕಾರಣಿಕರರ್ತರಾದ ಯಲ್ಲಾಪುರ- ಮುಂಡಗೋಡ- ಬನವಾಸಿ ವಿಧಾನಸಭಾ ಕ್ಷೇತ್ರದ ಮಹಾ ಜನತೆಗೆ, ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ರಾಜ್ಯ ಜನತೆಯ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಗೆ, ರಾಜ್ಯ ಮತ್ತು ಕೇಂದ್ರದ ಎಲ್ಲಾ ನಾಯಕರಿಗೂ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸೇತ್ತೆನೆ,'' ಎಂದು ಶಿವರಾಮ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
New Minister Shivaram Hebbar was born on June 4, 1957 in Arabail village of Yellapur Taluk in Uttara Kannada District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X