ಸತತ 9ನೇ ಬಾರಿಗೆ ಗೆದ್ದ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರು
ಕಾರವಾರ, ಡಿಸೆಂಬರ್ 30: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರುವೊಬ್ಬರು ಸತತ 9ನೇ ಬಾರಿಗೆ ಗ್ರಾಮ ಪಂಚಾಯಿತಿಗೆ ಎಂಟ್ರಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಳ್ಳಾಪುರ ವಾರ್ಡ್ ನ ಅಭ್ಯರ್ಥಿಯಾಗಿದ್ದ ಶ್ರೀಕಾಂತ ಶೆಟ್ಟಿ ಅವರು ಸತತ 9 ನೇ ಬಾರಿಗೆ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಈ ಹಿಂದೆ 6 ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದ ಶ್ರೀಕಾಂತ ಶೆಟ್ಟಿ ಅವರು, ಈ ಚುನಾವಣೆ ಸೇರಿ ಮೂರು ಬಾರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಅರಬೈಲ್ ಹಾಗೂ ಇಡಗುಂದಿ ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಮ ಹೆಬ್ಬಾರ್ ಅವರ ರಾಜಕೀಯ ಗುರುವಾಗಿದ್ದಾರೆ. ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಕೂಡ ಹಲವು ಬಾರಿ ಉಚ್ಚರಿಸಿದ್ದರು.












Click it and Unblock the Notifications