ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗೆ ಸೇರುವಂತೆ ಒತ್ತಾಯಿಸಿರುವುದು ನನ್ನ ಅಭಿಮಾನಿಗಳು: ಶಿವರಾಂ ಹೆಬ್ಬಾರ್

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಸೆಪ್ಟೆಂಬರ್.17: ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್​ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿಯು ಕಳೆದ ಹಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಹೆಬ್ಬಾರರು ಸ್ಪಷ್ಟನೆ ನೀಡಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ಷಣದವರೆಗೆ ರಾಜೀನಾಮೆ ಕೊಡುವ ಬಗ್ಗೆ ನಿರ್ಣಯವಾಗಿಲ್ಲ ಎಂದು ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ವರದಿಗಳಿಗೆ ಪದೇ ಪದೆ ಉತ್ತರ ಕೊಡಲು ನನ್ನಿಂದ ಸಾಧ್ಯವಿಲ್ಲ. ನನಗೆ ಗೊತ್ತಿಲ್ಲದ ಹಲವು ಸಂಗತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ.

30 ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರಷ್ಟೆ: ಕಮಲ್ ನಾಥ್30 ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರಷ್ಟೆ: ಕಮಲ್ ನಾಥ್

ಊಹೆಗೂ ನಿಲುಕದ ವಿಚಾರಗಳು ಮಾಧ್ಯಮಗಳಲ್ಲಿ ಭಿತ್ತರಗೊಳ್ಳುತ್ತಿರುವುದು ಆಶ್ಚರ್ಯ ತಂದಿದೆ. ಬಿಜೆಪಿಗೆ ಸೇರುವಂತೆ ನನ್ನ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಆದರೆ, ರಾಜಕೀಯ ಕ್ಷೇತ್ರದಲ್ಲಿ ಇದು ಸಾಮಾನ್ಯ ಎಂದು ತಿಳಿಸಿದ್ದಾರೆ.

Shivaram Hebbar Said My fans have urged me to join the BJP

 ವಿಶ್ಲೇಷಣೆ : ಬಿಎಸ್ವೈ ನೇತೃತ್ವದಲ್ಲಿ ಅಲ್ಪಮತದ ಸರಕಾರ ರಚಿಸಲು ಬಿಜೆಪಿ ಸಿದ್ಧ? ವಿಶ್ಲೇಷಣೆ : ಬಿಎಸ್ವೈ ನೇತೃತ್ವದಲ್ಲಿ ಅಲ್ಪಮತದ ಸರಕಾರ ರಚಿಸಲು ಬಿಜೆಪಿ ಸಿದ್ಧ?

ಕೆಲವು ಮಾಧ್ಯಮಗಳಲ್ಲಿ ಶಿವರಾಮ ಹೆಬ್ಬಾರ್ ಬಿಜೆಪಿ ಸೇರುವುದಾಗಿಯೂ, ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಬೆಂಗಳೂರಿಗೆ ತೆರಳುತ್ತಿರುವುದಾಗಿಯೂ ಸುದ್ದಿ ಬರುತ್ತಿದ್ದವು.

 ಕಾಂಗ್ರೆಸ್ ಶಾಸಕರ ಬೆಂಬಲ ಸಿಕ್ಕರೆ ಬಿಜೆಪಿ ಸರ್ಕಾರ: ಆಪರೇಷನ್‌ಗೆ ಅಸ್ತು? ಕಾಂಗ್ರೆಸ್ ಶಾಸಕರ ಬೆಂಬಲ ಸಿಕ್ಕರೆ ಬಿಜೆಪಿ ಸರ್ಕಾರ: ಆಪರೇಷನ್‌ಗೆ ಅಸ್ತು?

ಹೆಬ್ಬಾರರು, ಬೆಳಗ್ಗೆ ಪಟ್ಟಣದಲ್ಲಿ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಗಳ ದರ್ಶನ ಪಡೆದಿದ್ದಾರೆ. ಮಧ್ಯಾಹ್ನ ಬೆಂಗಳೂರಿಗೆ ತೆರಳಿ, ಸಭೆಯೊಂದರಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

English summary
Congress MLA Shivaram Hebbar Said there is no change in my stand. Decision to resign until now is not decided. My fans have urged me to join the BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X