ದುರಸ್ಥಿಗೆ ತಲುಪಿದರೂ ಮಂಜೂರಿಯಾಗದ ಕಟ್ಟಡ: ಗ್ರಾಮಸ್ಥರೇ ಸೇರಿ ನಿರ್ಮಿಸಿದ ಅಂಗನವಾಡಿ ಹೇಗಿದೆ ನೋಡಿ
ಕಾರವಾರ, ಡಿಸೆಂಬರ್ 25: ಬಾಲ್ಯದಿಂದಲೇ ಮಕ್ಕಳನ್ನು ಸುಸಿಕ್ಷಿತರನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲೆಡೆ ಅಂಗನವಾಡಿ ತೆರೆದಿದೆ. ಆದರೆ ಅದೇಷ್ಟೋ ಅಂಗನವಾಡಿಗಳಿಗೆ ಇಂದಿಗೂ ಮೂಲಭೂತ ಸೌಕರ್ಯದಿಂದ ಬಳಲುತ್ತೀವೆ. ಇದೇ ರಿತಿ ಅಂಗನವಾಡಿ ಕಟ್ಟಡ ಇಲ್ಲದೆ ಮನೆಯ ಕೋಣೆಯೊಂದರಲ್ಲಿ ನಡೆಸುತ್ತಿದ್ದ ಅಂಗನವಾಡಿಗೆ ಇದೀಗ ಗ್ರಾಮಸ್ಥರೇ ಸೇರಿ ತಾತ್ಕಾಲಿಕ ಅಂಗನವಾಡಿ ನಿರ್ಮಿಸುವ ಮೂಲಕ ಮಾದರಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿಳೆಗೋಡ ಗ್ರಾಮದಲ್ಲಿ ಇದೀಗ ಸ್ಥಳೀಯರ ಸಹಕಾರದಿಂದಾಗಿ ತಾತ್ಕಾಲಿಕ ಅಂಗನವಾಡಿ ನಿರ್ಮಿಸಿದ್ದಾರೆ. ಗ್ರಾಮದಲ್ಲಿ ಈ ಹಿಂದೆ ಇದ್ದ ಅಂಗನವಾಡಿ ಕಳೆದ ನಾಲ್ಕೈದು ವರ್ಷಗಳ ಹಿಂದೆ ದುರಸ್ತಿಗೆ ತಲುಪಿತ್ತು.

ಕಳೆದ ವರ್ಷ ಅಂಗನವಾಡಿಯಲ್ಲಿ ಮಕ್ಕಳನ್ನು ಕೂರಿಸುವುದು ಅಪಾಯಕಾರಿಯಾಗಿರುವುದರಿಂದ ಅಧಿಕಾರಿಗಳು ಬಾಡಿಗೆ ಕಟ್ಟಡ ನೋಡಲು ಸೂಚಿಸಿದ್ದರು. ಆದರೆ ಗ್ರಾಮದಲ್ಲಿ ಬಾಡಿಗೆ ಕಟ್ಟಡ ಸಿಗದ ಕಾರಣ ಗ್ರಾಮದಲ್ಲಿಯೇ ಓರ್ವವರು ತಮ್ಮ ಮನೆಯ ಒಂದು ಕೋಣೆಯನ್ನೇ ಮೂರು ತಿಂಗಳ ಅವಧಿಗೆ ಮಕ್ಕಳ ವಿದ್ಯಾರ್ಜನೆಗೆ ನೀಡಿದ್ದರು.
ಇತ್ತ ಕಟ್ಟಡ ಮಂಜೂರಿಗಾಗಿ ಕಾದು ಕುಳಿತ್ತಿದ್ದ ಊರವರು ಇಲಾಖೆಗಳಿಗೆ, ಅಧಿಕಾರಿಗಳಿಗೆ ಅದೇಷ್ಟೇ ಮನವಿ ಮಾಡಿದರೂ ಇವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತ ಮನೆಯವರು ಕೊಟ್ಟ ಅವಧಿ ಕೂಡ ಮುಕ್ತಾಯಗೊಂಡ ಕಾರಣ ಇದೀಗ ಉಡಳ್ಳಿ ಬಿಳೆಗೋಡ ಗ್ರಾಮಸ್ಥರು ಸೇರಿ ಹಳೆ ಅಂಗನವಾಡಿ ಕಟ್ಟಡದ ಬಳಿಯೇ ತಾತ್ಕಾಲಿಕ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಇದೀಗ ಅಂಗನವಾಡಿ ಸಿದ್ದಗೊಂಡಿದ್ದು ಇಂದು ಮಕ್ಳಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪೂಜೆ ಸಲ್ಲಿಸಿ ಅಂಗನವಾಡಿಯಲ್ಲಿ ವಿದ್ಯಾಭ್ಯಾಸ ಆರಂಭ ಮಾಡಿದ್ದಾರೆ.

ಗ್ರಾಮದಲ್ಲಿರುವ ಅಂಗನವಾಡಿ ದುರಸ್ಥಿಗೊಂಡು ಹಲವು ವರ್ಷ ಕಳೆದಿದ್ದು, ಈವರೆಗೂ ಕಟ್ಟಡ ಮಂಜೂರಿಯಾಗಿಲ್ಲ. ಅಂಗನವಾಡಿಯಲ್ಲಿ ಸುಮಾರು 20 ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಈ ಅಂಗನವಾಡಿ ಬಿಟ್ಟರೆ ನಾಲ್ಕೈದು ಕಿ.ಮೀ ದೂರ ಹೋಗಬೇಕಿದೆ. ಆದ್ದರಿಂದ ಕೂಡಲೇ ಸರ್ಕಾರ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಮಂಜೂರಿಸಬೇಕು ತುರ್ತಾಗಿ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರಾದ ತಿಲಕ್ ಗೌಡ ಒತ್ತಾಯಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ 2782 ಅಂಗನವಾಡಿ ಕೇಂದ್ರಗಳಿದ್ದು ಈ ಪೈಕಿ 322 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅಂಗನವಾಡಿಗಳಿಗೆ ಕಳೆದ ಏಪ್ರಿಲ್ ತಿಂಗಳಿನಿಂದ ಇದುವರೆಗೆ ಸುಮಾರು 8 ತಿಂಗಳ ಬಾಡಿಗೆ ಹಣ ಸರ್ಕಾರದಿಂದ ಪಾವತಿಯಾಗಿರಲಿಲ್ಲ.

ಹೀಗಾಗಿ ಅಂಗನವಾಡಿ ಸಿಬ್ಬಂದಿಯೇ ತಮ್ಮ ವೇತನದಲ್ಲಿಯೇ ಪ್ರತಿ ತಿಂಗಳ ಬಾಡಿಗೆಯನ್ನು ಪಾವತಿಸುವಂತಾಗಿತ್ತು. ಆದರೆ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್ ಕುಕನೂರ್ ಕೇಳಿದಾಗ ಅಂಗನವಾಡಿಗಳಿಗೆ ಇದೀಗ ಬಾಡಿಗೆ ಹಣ ಬಿಡುಗಡೆಯಾಗಿದೆ. ಕೂಡಲೇ ಆಯಾ ಅಂಗನವಾಡಿ ಬಾಡಿಗೆ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದ್ರೂ ಸಹ ಗ್ಯಾರಂಟಿ ಯೋಜನೆಗಳ ಬಗ್ಗೆ ತಲೆಕೆಡಿಸಿಕೊಂಡ ಸರ್ಕಾರ ಅಂಗನವಾಡಿಗಳ ಕಟ್ಟಡ ಮಂಜೂರಿಗೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ನಿಜಕ್ಕೂ ದುರಂತವೇ. ಇನ್ನಾದರೂ ಸರ್ಕಾರ ಈ ಬಗ್ಗೆ ಎಚ್ಚೆತ್ತು ಅಂಗನವಾಡಿಗಳ ಕಟ್ಟಡ ಸಮಸ್ಯೆ ಶಾಶ್ವತ ಪರಿಹಾರ ಒದಗಿಸುವತ್ತ ಗಮನ ಹರಿಸಬೇಕಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications