ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಸಿ ಗಲಭೆ ಪ್ರಕರಣ: 62 ಮಂದಿಗೆ ಮಧ್ಯಂತರ ಜಾಮೀನು

By ಡಿ.ಪಿ.ನಾಯ್ಕ
|
Google Oneindia Kannada News

ಕಾರವಾರ, ಡಿಸೆಂಬರ್ 15: ಶಿರಸಿ ಗಲಭೆಗೆ ಸಂಬಂಧಿಸಿದಂತೆ 62 ಮಂದಿಗೆ ಇಲ್ಲಿನ ಒಂದನೇ ಹೆಚ್ಚುವರಿ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

ಹೊನ್ನಾವರದ ಪರೇಶ್ ಮೇಸ್ತ ಸಾವಿನ ಕುರಿತಂತೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು 62 ಮಂದಿಯನ್ನು ಬಂಧಿಸಿದ್ದರು.

ಪರೇಶ್ ಮೇಸ್ತಾ ಸಾವು: 106 ಕ್ರಿಮಿನಲ್ ಕೇಸ್ ಜಡಿದ ಪೊಲೀಸರುಪರೇಶ್ ಮೇಸ್ತಾ ಸಾವು: 106 ಕ್ರಿಮಿನಲ್ ಕೇಸ್ ಜಡಿದ ಪೊಲೀಸರು

ಪೊಲೀಸರೇ ನಮ್ಮ ಕಾರ್ಯಕರ್ತರಿಗೆ ಹೊಡೆದಿದ್ದಾರೆ

'ಶಿರಸಿಯಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸುವ ಯಾವ ಘಟನೆಯೂ ನಡೆದಿಲ್ಲ. ಪೊಲೀಸರೇ ನಮ್ಮ ಕಾರ್ಯಕರ್ತರಿಗೆ ಹೊಡೆದಿದ್ದಾರೆ. ಆದರೆ ಸರ್ಕಾರ ಅಮಾಯಕರ ಮೇಲೆ ಕೊಲೆ ಆರೋಪ ಹೊರಿಸುವ ಮೂಲಕ ಭಯೋತ್ಪಾದನೆ ನಡೆಸುತ್ತಿದೆ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಆರೋಪಿಸಿದ್ದಾರೆ.

ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, "ಸರ್ಕಾರ ಭಯೋತ್ಪಾದನೆಯನ್ನು ನಿರ್ಮಾಣ ಮಾಡುತ್ತಿದೆ ಎನ್ನುವುದಕ್ಕೆ ಶಿರಸಿ ಬಂದ್ ಸಾಕ್ಚಿಯಾಗಿದೆ. ಈ ವೇಳೆ ಪೊಲೀಸರೇ ಕಲ್ಲು ತೂರಾಟ ನಡೆಸಿದ್ದು, ಮುಸ್ಲಿಂ ಗೂಂಡಾಗಳನ್ನು ನಿಲ್ಲಿಸಿಕೊಂಡು ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ," ಎಂದು ದೂರಿದ್ದಾರೆ.

ಮುಂದಿದೆ ಶಿರಸಿಯ ಮಾರಿಕಾಂಬ ಹಬ್ಬ

ಈ ಬಗ್ಗೆ ಫೇಸ್‌ಬುಕ್‌ ನಲ್ಲಿಯೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿರುವ ಅನಂತ ಕುಮಾರ್ ಹೆಗಡೆ, "ಸಾಕ ಬೇಕಾ ತಪರಾಕಿ ಸಿದ್ಧರಾಮಯ್ಯನವರೇ!! ನಿಂಬಾಳ್ಕರ್, ರಾಮಲಿಂಗಾ ರೆಡ್ಡಿ ಹಾಗು ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ನೋಡಿ ಇನ್ನು ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!" ಎಂದಿದ್ದಾರೆ.

ನಿಂಬಾಳ್ಕರ್ ಹುಂಬ ಪೊಲೀಸ್

ನಿಂಬಾಳ್ಕರ್ ಹುಂಬ ಪೊಲೀಸ್

'ಶಿರಸಿಯಲ್ಲಿ ಮೊನ್ನೆ ದಿನ ಪೊಲೀಸ್ ಪ್ರೇರಿತ ಗಲಭೆಯಲ್ಲಿ ಬಂಧಿತರಾಗಿದ್ದ 62 ಮಂದಿ ಮುಗ್ದರನ್ನು ಶಿರಸಿ ನ್ಯಾಯಾಲಯ ಜಾಮೀನು ಪಡೆದು ಬಿಡುಗಡೆಗೆ ಆದೇಶಿಸಿದೆ. ಕೇವಲ ಒಂದೂವರೆ ದಿನದಲ್ಲಿ ಬಿಡುಗಡೆಯ ಆದೇಶ ಪಡೆದ ಕ್ರಮವು ಐತಿಹಾಸಿಕವಾಗಿದ್ದು, ಈ ತೀರ್ಪು ಪೊಲೀಸ್ ಸಮವಸ್ತ್ರದಲ್ಲಿ ದಾದಾಗಿರಿ ಮಾಡಲು ಹೊರಟಿದ್ದ ನಿಂಬಾಳ್ಕರ್ ಎಂಬ ಹುಂಬ ಅಧಿಕಾರಿಗೆ ತೀವ್ರವಾದ ಕಪಾಳ ಮೋಕ್ಷ ಮಾಡಿದಂತಾಗಿದೆ' ಎಂದಿದ್ದಾರೆ.

ಇದು ಪ್ರಜಾಪ್ರಭುತ್ವದ ವಿಜಯ

ಇದು ಪ್ರಜಾಪ್ರಭುತ್ವದ ವಿಜಯ

'ಸೆಕ್ಷನ್ 307 ಅನ್ನು ಮನಬಂದಂತೆ ಜರುಗಿಸಿ ವಿಕೃತ ಪಭುತ್ವ ಸಾಧಿಸಲು ಹೊರಟರೆ, ಈ ದೇಶದ ಕಾನೂನು ಸುಮ್ಮನೆ ಕೂರುವುದಿಲ್ಲ ಎಂದು ಇಂದಿನ ನ್ಯಾಯಾಲಯದ ತೀರ್ಮಾನ ಸ್ಪಷ್ಟವಾಗಿ ತಿಳಿಸಿದೆ. ಇದು ಪ್ರಜಾಪ್ರಭುತ್ವದ ವಿಜಯ' ಎಂದು ಅವರು ಹೇಳಿದ್ದಾರೆ.

ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ

ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ

'ಸನ್ಮಾನ್ಯ ಸಿದ್ಧರಾಮಯ್ಯನವರೇ ನಿಮ್ಮ ಮುಖವನ್ನು ಮತ್ತೊಮ್ಮೆ ಕನ್ನಡಿ ಮುಂದೆ ನೋಡಿಕೊಳ್ಳಿ! ನಿಮ್ಮ ಒಡ್ಡೋಲಗದ ಸಹೋದ್ಯೋಗಿಗಳು ಸಹ ನಿಮ್ಮನ್ನು ನಡು ನೀರಿನಲ್ಲಿ ಕೈ ಬಿಟ್ಟು ಹೋಗುವ ದಿನ ದೂರವಿಲ್ಲ. ವಿದ್ರೋಹಿಗಳ ಬೆಂಬಲಕ್ಕೆ ನಿಂತು ದೇಶ ಭಕ್ತರನ್ನು ಸದೆಬಡಿಯುವ ನಿಮ್ಮ ಯೋಜನೆಗೆ, ನಿಮ್ಮ ಅಮೂಲ್ಯ ಸಲಹೆಗಾರನಾಗಲಿ ಅಥವಾ ನಾಲಾಯಕ್ ಗೃಹ ಮಂತ್ರಿಯಾಗಲಿ ಇನ್ನೇನು ತಾನೇ ಕಿಸಿಯಲು ಸಾಧ್ಯ?' ಎಂದು ಹೀಯಾಳಿಸಿದ್ದಾರೆ.

ತೀರ್ಪಿನಿಂದ ನೈತಿಕ ಬೆಂಬಲ ಹೆಚ್ಚಳ

ತೀರ್ಪಿನಿಂದ ನೈತಿಕ ಬೆಂಬಲ ಹೆಚ್ಚಳ

'ನಮ್ಮ ಹೋರಾಟಕ್ಕೆ ಇಂದಿನ ಈ ತೀರ್ಪು ಬಹು ದೊಡ್ಡ ನೈತಿಕ ಬೆಂಬಲ ನೀಡಿ ಹೋರಾಟದ ಕಿಚ್ಚನ್ನು ಇನ್ನಷ್ಟು ಹೆಚ್ಚಿಸಿದೆ. ಬರುವ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದ್ದು ಕೋಮುವಾದಿ, ಜಾತಿವಾದಿ ಹುಂಬ ಸರ್ಕಾರವಲ್ಲದೆ, ದೇಶದೊಳಗೆ ಇರುವ ವಿದ್ರೋಹಿಗಳಿಗೆ ಸಹ ನಮ್ಮ ಸಂಘಟಿತ ರುಚಿ ತೋರಿಸಲಿದ್ದೇವೆ. ಹುಂಬ ಧೈರ್ಯವಿದ್ದರೆ ಎದುರಿಸಲಿ!' ಎಂದು ಸವಾಲೆಸೆದಿದ್ದಾರೆ.

English summary
Sirsi special court here today granted interim bail to 62 people in connection with the riot cases. The riot happened after the death of Paresh Mesta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X