ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮರಗಳನ್ನು ಮಕ್ಕಳಂತೆ ಸಾಕಿದ 'ಕಾಡಿನ ಜೀವ' ತುಳಸಿ ಗೌಡ ಗೆ 'ಪದ್ಮಶ್ರೀ'

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜನವರಿ 25: ಶತಮಾನ ಕಂಡಿರುವ ಪರಿಸರ ಪ್ರೇಮಿ, ಈ ಹಾಲಕ್ಕಿ ಮಹಿಳೆ ಕಾರವಾರ ಜಿಲ್ಲೆಯ ಅಂಕೋಲದ ತುಳಸಿಗೌಡ ಅವರು ಕೇಂದ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿರುವ ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ, ಹಾಲಕ್ಕಿ ಸಮುದಾಯದ ತುಳಸಿ ಗೌಡ ಸೇರಿದಂತೆ 21 ಮಂದಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

ಸಾಲು ಮರದ ತಿಮ್ಮಕ್ಕನ ಸಾಲಿನಲ್ಲಿ ಉತ್ತರ ಕನ್ನಡದ ವೃಕ್ಷ ಪ್ರೇಮಿ ತುಳಸಿ ಗೌಡಸಾಲು ಮರದ ತಿಮ್ಮಕ್ಕನ ಸಾಲಿನಲ್ಲಿ ಉತ್ತರ ಕನ್ನಡದ ವೃಕ್ಷ ಪ್ರೇಮಿ ತುಳಸಿ ಗೌಡ

71 ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಪೈಕಿ ತುಳಸಿ ಗೌಡ ಅವರಿಗೆ ಸಮಾಜ ಸೇವೆ (ಪರಿಸರ) ಕ್ಷೇತ್ರದಲ್ಲಿ ಪ್ರಶಸ್ತಿ ಘೋಷಣೆಯಾಗಿದೆ.

2020ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ2020ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

ತುಳಸಿ ಗೌಡ ಅವರನ್ನು ಈ ಶತಮಾನ ಕಂಡ ನಿಜವಾದ ಪರಿಸರ ಪ್ರೇಮಿ ಎಂದೇ ಕರೆಯಬಹುದು. ವೃಕ್ಷಮಾತೆಯಾದ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ ಲಕ್ಷಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ.

ಹೊನ್ನಳ್ಳಿ ಗ್ರಾಮದ ನಾರಾಯಣ ಹಾಗೂ ನೀಲಿ ದಂಪತಿಗೆ 1944 ರಲ್ಲಿ ಜನಿಸಿದ ಇವರು, ಬಡಕುಟುಂಬದ ಹಿನ್ನಲೆಯವರು. ತನ್ನ ಎರಡನೇ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ತುಳಸಿಗೌಡ ಅವರು, ನಂತರ ಶಾಲೆ ಮೆಟ್ಟಿಲನ್ನೂ ಏರದೇ ತಾಯಿಯ ಜೊತೆ ಕೂಲಿ ಕೆಲಸಕ್ಕೆ ಹೋಗಲು ಪ್ರಾರಂಭಿಸಿದ್ದರು.

ಬೀಜಗಳನ್ನು ಶೇಖರಣೆ ಮಾಡುತ್ತಿದ್ದ ತುಳಸಿಗೌಡ

ಬೀಜಗಳನ್ನು ಶೇಖರಣೆ ಮಾಡುತ್ತಿದ್ದ ತುಳಸಿಗೌಡ

ಗೋವಿಂದೇಗೌಡ ಎನ್ನುವವರ ಜೊತೆ ಬಾಲ್ಯವಿವಾಹವಾದ ತುಳಸಿ ಸಹ ಚಿಕ್ಕವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ವಿಧವೆಯಾದರು. ಪರಿಸರ ಪ್ರೇಮ ಎನ್ನುವುದು ಈಕೆಗೆ ಹುಟ್ಟಿನಿಂದ ಬಂದಿತ್ತು. ಊರಿನವರ ಜೊತೆ ಸೌದೆ ತರುವ ಕೆಲಸವನ್ನು ಮಾಡಿ ಪ್ರತಿನಿತ್ಯ ಐದರಿಂದ ಆರು ರೂಪಾಯಿ ದುಡಿಯುತ್ತಿದ್ದರು.

ತುಳಸಿ ಗೌಡಗೆ ಅರಣ್ಯ ಇಲಾಖೆಯಿಂದ ಬೀಜಗಳನ್ನು ಶೇಖರಣೆ ಮಾಡಿ, ಸಸಿಗಳನ್ನಾಗಿ ಮಾಡಿಕೊಡುವ ಕೆಲಸವನ್ನು ಬಹಳ ಖುಷಿಯಿಂದ ಮಾಡುತ್ತಿದ್ದರು. ಕೇವಲ 1.25 ಪೈಸೆ ದಿನದ ಕೂಲಿಗೆ ಈ ಕೆಲಸವನ್ನ ಮಾಡುತ್ತಿದ್ದರು. ಎಲ್ಲರೂ ಕಡಿಮೆ ಕೂಲಿಗೆ ಸಸಿ ಮಾಡುವ ಕೆಲಸ ಬೇಡ ಅಂದರೂ ಇವರ ಪರಿಸರ ಕಾಳಜಿಯಿಂದ ಕೆಲಸವನ್ನ ಮಾತ್ರ ನಿಲ್ಲಿಸಲಿಲ್ಲ.

ಪರಿಸರದ ಮೇಲೆ ಅಪಾರ ಪ್ರೀತಿ ಹೊಂದಿದ್ದ ತುಳಸಿಗೌಡ

ಪರಿಸರದ ಮೇಲೆ ಅಪಾರ ಪ್ರೀತಿ ಹೊಂದಿದ್ದ ತುಳಸಿಗೌಡ

ಇದರೊಂದಿಗೆ ತಾನು ಬೆಳೆಸಿದ ಸಸಿಗಳನ್ನು ಹೊನ್ನಳ್ಳಿ ಭಾಗದ ಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ, ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದ್ದರು. ವರ್ಷಕ್ಕೆ ಇವರು ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯವನ್ನ ಮಾಡುತ್ತಾ ಬಂದರು.

ಬೀದಿಯಲ್ಲಿ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದವಗೆ ಪದ್ಮಶ್ರೀ ಗೌರವಬೀದಿಯಲ್ಲಿ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದವಗೆ ಪದ್ಮಶ್ರೀ ಗೌರವ

ಈಕೆ ನೆಟ್ಟು ಪೋಷಿಸಿದ ಸಸಿಗಳು ಇಂದು ಹೆಮ್ಮರವಾಗಿ ಸಾವಿರಾರು ಜನರಿಗೆ ಗಾಳಿ, ನೆರಳನ್ನು ನೀಡುತ್ತಿವೆ. ಪರಿಸರದ ಮೇಲಿನ ಈಕೆಯ ಪ್ರೀತಿಯನ್ನು ಕಂಡು ಅಂದಿನ ಅರಣ್ಯಾಧಿಕಾರಿಯಾಗಿದ್ದ ಅ.ನಾ.ಯಲ್ಲಪ್ಪ ರೆಡ್ಡಿ ಈಕೆಗೆ ಮಾಸ್ತಿಕಟ್ಟಿ ಅರಣ್ಯವಲಯದಲ್ಲಿ ಸಸಿಗಳನ್ನ ಪೋಷಿಸುವ ಕೆಲಸವನ್ನು ಸಹ ಕೊಡಿಸಿದ್ದರು.

ಕಳ್ಳರು ಮರಗಳನ್ನು ಕಡಿದಾಗ ಅತ್ತಿದ್ದ ತುಳಸಿಗೌಡ

ಕಳ್ಳರು ಮರಗಳನ್ನು ಕಡಿದಾಗ ಅತ್ತಿದ್ದ ತುಳಸಿಗೌಡ

ತುಳಸಿಗೌಡಗೆ ಪರಿಸರ ಪ್ರೀತಿ ಎಷ್ಟಿದೆ ಎಂದರೆ, ಇವರನ್ನು ಮರಗಳ ವಿಜ್ಞಾನಿ ಎಂದೇ ಹೇಳಬಹುದು. ಯಾವ ಯಾವ ಗಿಡಗಳನ್ನು ಯಾವ ಋತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ, ಹೀಗೆ ಅರಣ್ಯದಲ್ಲಿನ ಸುಮಾರು 300 ಕ್ಕೂ ಹೆಚ್ಚು ಪ್ರಭೇದದ ಮರಗಳ ಬಗ್ಗೆ ತುಳಸಿಗೆ ಮಾಹಿತಿ ಇದೆ.

ಅರಣ್ಯದಲ್ಲಿನ ಪ್ರತಿ ಮರಗಳ ನಾಡಿ ಮಿಡಿತವನ್ನು ತುಳಸಿ ಹೇಳುತ್ತಾರೆ. ತನ್ನ ಸುತ್ತಮುತ್ತಲೂ ಯಾರು ಮರಗಳನ್ನು ಕಡಿಯದಂತೆ, ಮರಗಳನ್ನು ತನ್ನ ಮಕ್ಕಳಂತೆ ಸಾಕುತ್ತಾರೆ. ಕೆಲವೊಮ್ಮೆ ಅರಣ್ಯದಲ್ಲಿ ತಾನು ನೆಟ್ಟ ಮರವನ್ನು ಅರಣ್ಯ ಕಳ್ಳರು ಕಡಿದಾಗ ತುಳಸಿ ಮರವನ್ನ ಅಪ್ಪಿ ಅತ್ತ ಘಟನೆಗಳು ಸಾಕಷ್ಟಿದೆ. ಈಕೆ ಲಕ್ಷಾಂತರ ಮರಗಳನ್ನು ಬೆಳೆಸಿ ಇಂದಿಗೂ ತನ್ನ ಬೀಜದಿಂದ ಸಸಿ ಮಾಡಿ ನಂತರ ನೆಟ್ಟು ಪೋಷಿಸುವ ಕೆಲಸವನ್ನು ಮುಂದುವರೆಸಿದ್ದಾರೆ.

ರಾಷ್ಟ್ರವೇ ಮೆಚ್ಚುವ ಕೆಲಸ ಮಾಡಿರುವ ತುಳಸಿಗೌಡ

ರಾಷ್ಟ್ರವೇ ಮೆಚ್ಚುವ ಕೆಲಸ ಮಾಡಿರುವ ತುಳಸಿಗೌಡ

ತುಳಸಿ ಗೌಡರ ಸಾಧನೆಯನ್ನು ಮೆಚ್ಚಿ ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ "ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ' ಈಗಾಗಲೇ ಲಭಿಸಿದೆ. ಅಂದಿನ ಪ್ರಧಾನಿ ವಿ.ಪಿ.ಸಿಂಗ್‌ ರಿಂದ ಪ್ರಶಸ್ತಿ ಪಡೆಯುವ ಮೂಲಕ ಹಾಲಕ್ಕಿ ಸಮುದಾಯದ ಮಹಿಳೆ ಇಡೀ ದೇಶದ ಗಮನ ಸೆಳೆದಿದ್ದರು.

ಇನ್ನು ರಾಜ್ಯೋತ್ಸವ ಪ್ರಶ್ತಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು, ಸಂಘ ಸಂಸ್ಥೆಗಳು ನೀಡುವ ಸನ್ಮಾನಗಳು, ತುಳಸಿ ಗೌಡರಿಗೆ ಲಭಿಸಿದೆ. ಆದರೂ ಇಂದಿಗೂ ಎಲೆ ಮರೆಯ ಕಾಯಿಯಂತೆ ತುಳಸಿ ಗೌಡ ತನ್ನ ಕಾಯಕವನ್ನು ಮುಂದುವರೆಸಿದ್ದಾರೆ. ನಿಜಕ್ಕೂ ಹಾಲಕ್ಕಿ ಅನ್ನುವ ಪುಟ್ಟ ಸಮುದಾಯದಲ್ಲಿ ಹುಟ್ಟಿ ತುಳಸಿ ಇಡೀ ರಾಷ್ಟ್ರವೇ ಮೆಚ್ಚುವಂತಹ ಕೆಲಸವನ್ನು ಮಾಡುವ ಮೂಲಕ ಸಾಧಕಿಯಾಗಿದ್ದಾರೆ.

English summary
Tulasi Gowda of Ankola in Karwar district has been selected for the prestigious Padma Shri award.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X