ಸಚಿವ ಶಿವರಾಮ್ ಹೆಬ್ಬಾರ್ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಒಡಕು...?
ಕಾರವಾರ, ಫೆಬ್ರವರಿ 16: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಮದನೂರು ಗ್ರಾಮ ಪಂಚಾಯತಿಯ ದನಗರ ಗೌಳಿ ಸಮುದಾಯದ ಸದಸ್ಯನೋರ್ವನ ಮೇಲಿನ ಹಲ್ಲೆ ಪ್ರಕರಣ ಜಿಲ್ಲೆಯಲ್ಲಿ ಸಾಕಷ್ಟು ಸದ್ದು ಮಾಡಿದೆ. ಇನ್ನು ಇದೇ ಪ್ರಕರಣ ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸ್ವಕ್ಷೇತ್ರದ ಬಿಜೆಪಿ ಪಕ್ಷದಲ್ಲಿ ಬಿರುಕು ಮೂಡಲು ಕಾರಣವಾಗಿದೆ ಎನ್ನುವ ಮಾತು ಕೇಳಿ ಬಂದಿದೆ.
ಮದನೂರು ಗ್ರಾಮ ಪಂಚಾಯತಿ ಸದಸ್ಯ ಹಾಗೂ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಯಾದ ದನಗರ ಗೌಳಿ ಸಮುದಾಯದ ವಿಠು ಶಿಳ್ಕೆ ಹಾಗೂ ಆತನ ಜೊತೆ ಇದ್ದ ಕೆಲವರ ಮೇಲೆ ಧಾರವಾಡ ಜಿಲ್ಲೆಯ ಕಲಘಟಗಿ ಹೋಟೆಲೋಂದರಲ್ಲಿ ಹಲ್ಲೆ ಮಾಡಲಾಗಿತ್ತು. ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಸಚಿವರ ಆಪ್ತರಾಗಿರುವ ಕಿರುವತ್ತಿಯ ವಿಜಯ್ ಮಿರಾಶಿ ತನ್ನ ಬೆಂಬಲಿಗರನ್ನು ಬಿಟ್ಟು ಹಲ್ಲೆ ಮಾಡಿಸಿದ್ದಾರೆಂದು ನೇರವಾಗಿ ಆರೋಪಿಸಲಾಗಿತ್ತು.
ಇನ್ನು ಇದೇ ಘಟನೆ ಬಿಜೆಪಿಯಲ್ಲಿ ಎರಡು ಗುಂಪಾಗಲು ಕಾರಣವಾಗಿದೆ. ವಿಜಯ್ ಮಿರಾಶಿ ಮೇಲಿದ್ದ ಸಿಟ್ಟಿಗೆ ಸಚಿವರ ವಿರುದ್ಧವೇ ಕೆಲ ಬಿಜೆಪಿಗರು ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ಹಲ್ಲೆ ಮಾಡಿಸಿದ್ದಾರೆ ಎನ್ನುವ ಆರೋಪವಿರುವ ವಿಜಯ್ ಮಿರಾಶಿ ಬಿಜೆಪಿಯ ಮುಖಂಡನಾಗಿದ್ದು, ಜೊತೆಗೆ ಹೆಬ್ಬಾರ್ ಆಪ್ತ ಬಳಗದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. ಹಲ್ಲೆ ಮಾಡಿದ ದಿನವೇ ಬಿಜೆಪಿ ನಾಯಕರು ಮಿರಾಶಿ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಅಲ್ಲದೇ ಸೋಮವಾರ ಸಹ ದನಗರ ಗೌಳಿ ಸಮುದಾಯದ ವತಿಯಿಂದ ವಿಜಯ್ ಮಿರಾಶಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್ ಪಾಟೀಲ್ ಸೇರಿದಂತೆ ಹಲವು ಬಿಜೆಪಿ ಮುಖಂಡರುಗಳೇ ಪ್ರತಿಭಟನೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ನಾಯಕನ ವಿರುದ್ಧ ಬಿಜೆಪಿ ನಾಯಕರೇ ಪ್ರತಿಭಟನೆ ನಡೆಸುವಂತಾಗುತ್ತಿದ್ದು, ಇಡೀ ಕ್ಷೇತ್ರದಲ್ಲಿ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ವಿಜಯ್ ಮಿರಾಶಿ ವಿರುದ್ಧ ಸ್ವಪಕ್ಷದವರೇ ಒಂದೆಡೆ ತಿರುಗಿ ಬಿದ್ದಿದ್ದರೆ, ಇನ್ನೊಂದೆಡೆ ಅವರ ಪರ ಸಹ ಕೆಲ ಬಿಜೆಪಿ ನಾಯಕರು ಬ್ಯಾಟಿಂಗ್ ಮಾಡುತ್ತಿದ್ದು, ಐ ಸ್ಟಾಂಡ್ ವಿಥ್ ವಿಜಯ್ ಮಿರಾಶಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಸಹ ಮಾಡಿದ್ದರು. ಇದಲ್ಲದೇ ವಿಜಯ್ ಮಿರಾಶಿ ಗಲಾಟೆ ನಡೆದ ಸಂಧರ್ಭದಲ್ಲಿ ಹೋಟೆಲ್ ಬಳಿ ಇಲ್ಲದಿದ್ದರೂ ಉದ್ದೇಶಪೂರ್ವಕವಾಗಿ ಎಫ್‌ಐಆರ್ ಹಾಕಲಾಗಿದೆ. ಅದನ್ನು ರದ್ದು ಮಾಡುವಂತೆ ಪ್ರತಿಭಟನೆಯನ್ನು ಸಹ ಮಾಡಿದ್ದರು.
ಪ್ರಕರಣ ಇದೀಗ ಸಮುದಾಯಗಳ ನಡುವಿನ ಭಿನ್ನಮತಕ್ಕೆ ಸಹ ಕಾರಣವಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ಹಲ್ಲೆಗೊಳಗಾದ ವಿಠು ಶಿಳ್ಕೆ ಪರ ಆತನ ದನಗರ ಗೌಳಿ ಸಮುದಾಯದವರು ನಿಂತು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರೆ, ಇತ್ತು ವಿಜಯ್ ಮಿರಾಶಿ ಮೇಲೆ ಎಫ್‌ಐಆರ್ ಆಗಿರುವುದಕ್ಕೆ ಅವರ ಮರಾಠಾ ಸಮುದಾಯ ಸಹ ವಿಜಯ್ ಮಿರಾಶಿ ಪರ ನಿಂತು ಪ್ರತಿಭಟನೆ ಮಾಡುತ್ತಿದ್ದು, ಇದು ಮುಂದಿನ ದಿನದಲ್ಲಿ ಬಿಜೆಪಿ ಪಕ್ಷದ ಮೇಲೆ ಪರಿಣಾಮ ಬೀಳಲಿದೆ ಎನ್ನಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications