• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಮಾರ್ಕೆಪೂನವ್' ಜಾತ್ರೆ ಸಂಪನ್ನ; ಸೂಚಿ ಚುಚ್ಚಿಕೊಂಡು ಹರಕೆ ತೀರಿಸಿದ ಮಕ್ಕಳು

By ಕಾರವಾರ ಪ್ರತಿನಿಧಿ
|

ಕಾರವಾರ, ಫೆಬ್ರವರಿ 28: ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಭಾನುವಾರ 'ಮಾರ್ಕೆಪೂನವ್' ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಹರಕೆಯ ನಿಮಿತ್ತ ಗಂಡು ಮಕ್ಕಳಿಗೆ ಹೊಟ್ಟೆಯ ಭಾಗಕ್ಕೆ ಸೂಜಿ ಚುಚ್ಚಿ ದಾರ ಪೋಣಿಸುವ ಸಂಪ್ರದಾಯ ನಡೆಯಿತು.

ಪ್ರೌಢಾವಸ್ಥೆಯ ಪೂರ್ವದಲ್ಲಿ ಗಂಡು ಮಕ್ಕಳ ಹೊಕ್ಕಳ ಬಳಿ ದಾರ ಪೋಣಿಸಿಕೊಳ್ಳುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇಲ್ಲಿನ ಜನರಲ್ಲಿದೆ. ಈ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದ್ದು, ಭಾನುವಾರ 'ದಾಡ್' ದೇವಸ್ಥಾನದಲ್ಲಿ 20ಕ್ಕೂ ಹೆಚ್ಚು ಗಂಡು ಮಕ್ಕಳು ಅರ್ಚಕರಿಂದ ದಾರ ಪೋಣಿಸಿಕೊಂಡು ಹರಕೆ ಅರ್ಪಿಸಿದರು.

ಕೋವಿಡ್ ಪರಿಸ್ಥಿತಿ; ಕೊಟ್ಟೂರು ಶ್ರೀ ಗುರು ಕೊಟ್ಟೂರೇಶ್ವರ ಜಾತ್ರೆ ರದ್ದು

ಸೂಜಿ ದಾರವನ್ನು ಮಕ್ಕಳ ಪಾಲಕರೇ ತಂದಿದ್ದರು. ಸೂಜಿ ಚುಚ್ಚುವ ಸಂದರ್ಭದಲ್ಲಿ ಮಕ್ಕಳು ಸಂಪ್ರದಾಯದಂತೆ 'ಅಯ್ಯಯ್ಯೋ' ಎಂದು ಕೂಗಿದರು. ಶ್ರೀರಾಮನಾಥ ಕ್ಷೇತ್ರದ ಪರಿವಾರ ದೇವರ ಜಾತ್ರೆ ಇದಾಗಿದ್ದು, ಪ್ರತಿವರ್ಷ ಶುದ್ಧ ಪೂರ್ಣಿಮೆಯಂದು ಈ ಜಾತ್ರೆ ಜರುಗುತ್ತದೆ. ಹುಣ್ಣಿಮೆಗೆ ಕೊಂಕಣಿ ಭಾಷೆಯಲ್ಲಿ 'ಪೂನವ್' ಎನ್ನುತ್ತಾರೆ. ಹೀಗಾಗಿ ಈ ಜಾತ್ರೆಯನ್ನು 'ಮಾರ್ಕೆಪೂನವ್' ಎಂದು ಕರೆಯುತ್ತಾರೆ.

ಜಾತ್ರೆ, ಉತ್ಸವಗಳಿಗೆ ಅಸ್ತು: ಭಕ್ತಾದಿಗಳಿಗೆ ಸಂತಸದ ಸುದ್ದಿ ನೀಡಿದ ರಾಜ್ಯ ಸರ್ಕಾರ

ಹೆಣ್ಣು ಮಕ್ಕಳು ಕುಲದೇವರಿಗೆ ದೀವಜ್ (ದೀಪ) ನೀಡಿ ಹರಕೆ ಅರ್ಪಿಸಿದರು. ಈ ಗ್ರಾಮದ ಹುಡುಗಿ ಅಥವಾ ಸೊಸೆಯಾಗಿ ಗ್ರಾಮಕ್ಕೆ ಕಾಲಿರಿಸಿದವಳು ತಲೆ ಮೇಲೆ ದೀಪವನ್ನಿರಿಸಿಕೊಂಡು 'ದಾಡ್' ದೇವಸ್ಥಾನದಿಂದ 'ಮಾರಿಕಾ ದೇವಿ' (ದೇವತಿ) ದೇವಸ್ಥಾನದವರೆಗೆ ಕಾಲ್ನಡಿಗೆಯಲ್ಲಿ ಬಂದು ಅಲ್ಲಿನ ದೇವತೆಗೆ ತಾವು ಹೊತ್ತು ತಂದ ದೀಪ ತೋರಿಸಿ ಭಕ್ತಿ ಪ್ರದರ್ಶಿಸಿದರು.

ಹಲವು ಸುರಕ್ಷತಾ ಕ್ರಮಗಳೊಂದಿಗೆ ನಿರ್ವಿಘ್ನವಾಗಿ ನಡೆದ 'ದ್ವೀಪ ಜಾತ್ರೆ'

ಕಾಕಡ ಹೂವಿನಿಂದ ಅಲಂಕೃತಗೊಂಡ ಬಂಡಿಯನ್ನು ಭಕ್ತರು 'ದಾಡ್' ದೇವಸ್ಥಾನದಿಂದ ದೇವತಿ ದೇವಸ್ಥಾನದವರೆಗೆ ಎಳೆದರು. ಈ ಜಾತ್ರೆಗೆ ಗೋವಾ ಹಾಗೂ ಮಹಾರಾಷ್ಟ್ರದಿಂದಲೂ ಸಾವಿರಾರು ಭಕ್ತರು ಬಂದು ಪೂಜೆ ಸಲ್ಲಿಸಿದರು.

"ಇಲ್ಲಿನ ಮಾರಿಕಾ ದೇವಿಗೆ ದೀಪದಿಂದ ಆರತಿ ಬೆಳಗುವುದರಿಂದ ಆಕೆ ಕುಲದೇವರ ಪ್ರೀತಿಗೆ ಪಾತ್ರಳಾಗುತ್ತಾಳೆ ಎನ್ನುವುದು ನಂಬಿಕೆ ಹಾಗೂ ದಾಡ್ ದೇವಸ್ಥಾನದಲ್ಲಿ ಗಂಡು ಮಕ್ಕಳು ಪೋಣಿಸಿಕೊಂಡ ದಾರವನ್ನು ಮಾರಿಕಾ ದೇವಿಯ ದೇವಸ್ಥಾನದಲ್ಲಿ ತೆಗೆಯಲಾಗುತ್ತದೆ. ಈ ಹರಕೆ ತೀರಿಸಿದರೆ ಗಂಡು ಮಕ್ಕಳ ಭವಿಷ್ಯ ಉತ್ತಮವಾಗಿರುತ್ತದೆ" ಎನ್ನುತ್ತಾರೆ ಅರ್ಚಕ ಅಶೋಕ ಗುರವ್.

English summary
Thousands of devotees witnessed for Uttata Kannada district Karwar Marke Punav jatra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X