ಉತ್ತರ ಕನ್ನಡದಲ್ಲಿ ನಕಲಿ ಮತದಾರರು: 5,677 ಜನರಿಗೆ ನೋಟಿಸ್, ನಿಮ್ಮ ಮನೆಗೂ ಬಂದಿದ್ಯಾ ಚೆಕ್ ಮಾಡಿಕೊಳ್ಳಿ..!
ಕಾರವಾರ, ಡಿಸೆಂಬರ್ 06: ರಾಜ್ಯದಲ್ಲಿ ಲೋಕಸಭೆ ಚುಣಾವಣೆ ಸಮೀಪಿಸುತ್ತಿದ್ದಂತೆ ನಕಲಿ ಮತದಾರರ ಪತ್ತೆ ಮಾಡಲಾಗುತ್ತಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಸಾವಿರಾರು ನಕಲಿ ಮತದಾರರ ಚೀಟಿ ಇರುವುದು ಪತ್ತೆಯಾಗಿದೆ. ಇದೀಗ ಈ ನಕಲಿ ಮತದಾರರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಮುಂದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನಕಲು ಮಾಡಿರುವ ಅಥವಾ ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ರಾಜ್ಯದ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪೀಡ್ ಪೋಸ್ಟ್ ಮೂಲಕ 40 ಲಕ್ಷ ಚುನಾವಣಾ ಫೋಟೋ ಗುರುತಿನ ಚೀಟಿಗಳನ್ನು (ಇಪಿಐಸಿ) ರವಾನಿಸುತ್ತಿದೆ.

ಇಪಿಐಸಿಗಳು ಮತ್ತು ನೋಟಿಸ್‌ಗಳ ಬುಕಿಂಗ್ ಮತ್ತು ವಿತರಣೆಗಾಗಿ ಅಂಚೆ ಇಲಾಖೆ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಡುವೆ ಈ ಹಿಂದೆ ಸಹಿ ಮಾಡಿದ ತಿಳುವಳಿಕಾ ಒಪ್ಪಂದವನ್ನು ಅನುಸರಿಸುತ್ತಿದೆ. ನಕಲಿ ಅಥವಾ ಎರಡು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಸಾಧ್ಯತೆ ಹೆಚ್ಚಾಗಿರುವವರ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 5,677 ಜನರನ್ನು ಚುನಾವಣಾ ಇಲಾಖೆ ಪತ್ತೆ ಮಾಡಿದೆ. ಇವರು ನೋಟಿಸ್ ಜಾರಿ ಮಾಡುವ ಪ್ರಕ್ರಿಯೇ ಆರಂಭಗೊಂಡಿದೆ.
ಜಿಲ್ಲೆಯಲ್ಲಿ ಆರು ವಿಧಾನ ಸಭಾ ಕ್ಷೇತ್ರಗಳಿದ್ದು ಇವುಗಳ ಪೈಕಿ ಕಾರವಾರದಲ್ಲಿ ಅತೀ ಹೆಚ್ಚು ನಕಲಿ ಅಥವಾ ಎರಡು ಕಡೆ ಹೆಸರು ನೋಂದಣಿ ಹೊಂದಿರುವವರು ಇದ್ದಾರೆ. ಕಾರವಾರ-ಅಂಕೋಲಾ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ 1325, ಕುಮಟಾದಲ್ಲಿ 832, ಭಟ್ಕಳ ಕ್ಷೇತ್ರದಲ್ಲಿ 1264, ಶಿರಸಿಯಲ್ಲಿ 992, ಯಲ್ಲಾಪುರದಲ್ಲಿ 510 ಹಾಗೂ ಹಳಿಯಾಳ ಕ್ಷೇತ್ರದಲ್ಲಿ 754 ಜನರನ್ನು ಚುನಾವಣಾ ಆಯೋಗವು ಪತ್ತೆ ಮಾಡಿದೆ.
ಜಿಲ್ಲೆಗೆ ಸಂಬಂಧಿಸಿದಂತೆ 5677 ನಕಲಿ ಮತಗಳು ನಿರ್ಣಾಯಕ ಪಾತ್ರ ವಹಿಸಬಹುದಾಗಿದೆ. ಒಬ್ಬನೇ ಮತದಾರ ಎರಡು ಕಡೆಗಳಲ್ಲಿ ಹೆಸರು ನೊಂದಾಯಿಸಿದವರ ಹೆಸರನ್ನು ಯಾವುದಾರರೂ ಒಂದು ಮತದಾರ ಪಟ್ಟಿಯಿಂದ ತೆಗೆದು ಹಾಕಲು ವ್ಯವಸ್ಥೆ ಮಾಡಲಾಗುತ್ತಿದೆ. ಚುನಾವಣಾ ಆಯೋಗವು ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮಾಹಿತಿಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ನಕಲಿ ಮತದಾರನ್ನು ಪತ್ತೆ ಮಾಡಿದೆ.
2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಈ ನಕಲಿಗಳು ಎರಡು ಕಡೆಗಳಲ್ಲಿ ಮತ ಚಲಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಹೀಗೆ ನಕಲು ಮಾಡಿದ ಹೆಸರುಗಳನ್ನು ಆಯೋಗ ಮತದಾರ ಪಟ್ಟಿಯಿಂದಲೇ ತೆಗೆದು ಹಾಕಲಿದೆ.
ಮತದಾರರ ಪಟ್ಟಿಯಲ್ಲಿ ಎರಡು ಕಡೆಗಳಲ್ಲಿ ಹೆಸರು ಹೊಂದರಿರುವುದ ಕಾನೂನಿಗೆ ಬಾಹಿರವಾಗಿದೆ. ಆದರೆ ಈವರೆಗೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಕಟ್ಟುಕಟ್ಟಿನ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ನಕಲಿ ಮತದಾರರನ್ನು ಪತ್ತೆ ಕಾರ್ಯ ನಡೆಸಿದೆ.
ಈ ಬಗ್ಗೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ), ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದು, 'ಒಬ್ಬ ವ್ಯಕ್ತಿ ಒಂದಕ್ಕಿಂದ ಹೆಚ್ಚು ಗುರುತಿನ ಚೀಟಿ, ಅಥವಾ ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬಂದಿವೆ. ರಾಜ್ಯದಾದ್ಯಂತ ಮತದಾರರ ಯಾವುದೇ ರೀತಿಯ ನಕಲು ತೆಗೆದುಹಾಕುವ ಕ್ರಮ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಹೆಸರುಗಳನ್ನು ಹೊಂದಿರುವ ಎಲ್ಲಾ ಮತದಾರರಿಗೆ ನೋಟಿಸ್‌ಗಳನ್ನು ನೀಡಿದ್ದೇವೆ' ಎಂದು ಹೇಳಿದ್ದಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications