ಗೋಕರ್ಣ; ಕಡಲ ತೀರದಲ್ಲಿ ಬೆಂಗಳೂರಿನ ಮೂವರು ಸಾವು

ಕಾರವಾರ, ಜನವರಿ 21: ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದವರು ಗೋಕರ್ಣ ಕಡಲಿನಲ್ಲಿ‌ ಈಜಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ಮೃತಪಟ್ಟವರನ್ನು ಬೆಂಗಳೂರಿನ ಹೆಬ್ಬಗೋಡಿ ತಿರುಪಾಲ್ಯದ ಸುಮಾ (21), ತಿಪ್ಪೇಶ್ ನಾಯಕ್ (20) ಮತ್ತು ರವಿ (35) ಮೃತಪಟ್ಟವರು. ಇನ್ನಿಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ ಇವರು ಪ್ರವಾಸಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜುತ್ತಿದ್ದಾಗ ಒಮ್ಮೆಲೆ ಬಂದ ಅಲೆ ಐವರನ್ನೂ ಎಳೆದೊಯ್ದಿತ್ತು. ತಕ್ಷಣ ಅಲ್ಲಿಯೇ ಇದ್ದ ಬೋಟಿಂಗ್ ಚಟುವಟಿಕೆ ನಡೆಸುವ ಸಿಬ್ಬಂದಿ ರಕ್ಷಣೆಗೆ ಧಾವಿಸಿದರು.

Three Died In The Time Of Swimming In Gokarna Beach

ಆದರೆ, ಐವರ ಪೈಕಿ ಇಬ್ಬರನ್ನು ಮಾತ್ರ ರಕ್ಷಣೆ ಮಾಡಲು ಸಾಧ್ಯವಾಯಿತು. ಮೂವರನ್ನು ದಡಕ್ಕೆ ತಂದರಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+