ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿ ಪ್ರದೇಶದಲ್ಲಿ ಭಯೋತ್ಪಾದನೆ ತಡೆಗಟ್ಟಲು ಬಿಗಿ ಭದ್ರತೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಅಕ್ಟೋಬರ್ 7: ಭಯೋತ್ಪಾದಕ ದಾಳಿ ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಭಯೋತ್ಪಾದಕ ದಾಳಿ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎನ್ನುವುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಅಣುಕು ಕಾರ್ಯಾಚರಣೆ ಮಾಡಲಾಗುತ್ತಿದೆ.

ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ಭಾರತೀಯ ನೌಕಾಸೇನೆ ಜಂಟಿಯಾಗಿ ಅಕ್ಟೋಬರ್ 7 ಹಾಗೂ 8 ರಂದು ಸಾಗರ ಕವಚ ಅಣುಕು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

Karwar: Tight Security To Prevent Terrorism In Coastal Areas

ಅಣುಕು ಕಾರ್ಯಾಚರಣೆಯ ಸಂದರ್ಭದಲ್ಲಿ, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಬೀಚ್ ಗಳು, ದೇವಸ್ಥಾನ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದಲ್ಲಿ ವ್ಯಾಪಕ ತಪಾಸಣೆ ನಡೆಯಲಿದೆ.

Karwar: Tight Security To Prevent Terrorism In Coastal Areas

Recommended Video

Sira ಹಾಗು R.R Nagar ಉಪಚುನಾವಣೆಗೆ ಕೈ ಅಭ್ಯರ್ಥಿಗಳು ಇವರೇ | Oneindia Kannada

ಈ ವೇಳೆಯಲ್ಲಿ ಪೊಲೀಸರು ವಾಹನಗಳ ತಪಾಸಣೆ ಕೂಡಾ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹರೀಶ್ ಕುಮಾರ್.ಕೆ ರವರು ತಿಳಿಸಿದ್ದಾರೆ.

English summary
Precautionary measures are being taken in the coastal area of ​​Uttara Kannada district to prevent terrorist attacks and other acts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X