ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು-ಅಧಿಕೃತ ಘೋಷಣೆಯಷ್ಟೇ ಬಾಕಿ
Uttara Kaannada Lok Sabha Election 2024: ಉತ್ತರ ಕನ್ನಡ ಧಾರವಾಡ ಲೋಕಸಭಾ ಚುನಾಚಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಈ ಕ್ಷೇತ್ರಕ್ಕೆ ಮೇ 07ರಂದು ನಡೆದ ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನ ಆಗಿತ್ತು. ಇನ್ನು ಇಂದಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಜಯ ಪತಾಕೆಯನ್ನು ಹಾರಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಬಿಜೆಪಿಯಿಂದ ವಿಶೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದ್ದರು. ಇನ್ನು ಇಂದು ಫಲಿತಾಂಶದಲ್ಲಿ ಕೊನೆಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿ ಕೋಟೆಯನ್ನು ಭದ್ರಪಡಿಸಿಕೊಂಡಿದ್ದಾರೆ.
28 ವವರ್ಷಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿ ಬದಲಿಸಲಿದ್ದು, ಆರು ಬಾರಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಲಾಗಿದ್ದು, ಕಾಂಗ್ರೆಸ್‌ನಿಂದ ಖಾನಾಪುರ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಲ್ಲಿಂದ ಮೊದಲ ಬಾರಿ ಸ್ಪರ್ಧಿಸಿದ್ದರು.
1952ರಿಂದ ಕ್ಷೇತ್ರವನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಕಾಂಗ್ರೆಸ್ 1996ರಲ್ಲಿ ಸೋಲನುಭವಿಸಿದ್ದು, 1999ರಲ್ಲಿ ಪುನಃ ಗೆಲುವು ಸಾಧಿಸಿದರೂ 2004ರಿಂದ ಕ್ಷೇತ್ರ ಬಿಜೆಪಿಯ ತೆಕ್ಕೆಯಲ್ಲಿತ್ತು. ಬಿಜೆಪಿಯು ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆಲುವಿನತ್ತ ಸಾಗುತ್ತಾ ಬಂದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ 7,86,042 ಮತಗಳನ್ನು ಗಳಿಸುವ ಮೂಲಕ 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಮೂಲಕ 3,06,393 ಮತಗಳನ್ನು ಪಡೆದ ಜೆಡಿ (ಎಸ್)ನ ಆನಂದ್ ಅಸ್ನೋಟಿಕರ್ ಅವರನ್ನು ಅನಂತ್ ಕುಮಾರ್ ಹೆಗಡೆ ಸೋಲಿಸಿದರು. ಇನ್ನು ಈ ಕ್ಷೇತ್ರದಲ್ಲಿ 2019ರಲ್ಲಿ 74.10 ಮತದಾನವಾಗಿತ್ತು.












Click it and Unblock the Notifications