Get Updates
Get notified of breaking news, exclusive insights, and must-see stories!

Uttara Kaannada Lok Sabha Election 2024 Results LIVE: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು

Uttara Kaannada Lok Sabha Election 2024: ಉತ್ತರ ಕನ್ನಡ ಧಾರವಾಡ ಲೋಕಸಭಾ ಚುನಾಚಣೆಯ ಫಲಿತಾಂಶ ಇಂದು (ಜೂನ್‌ 04) ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಮೇ 07ರಂದು ನಡೆದ ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನ ಆಗಿದೆ. ಇನ್ನು ಇಂದಿನ ಮತ ಎಣಿಕೆಯಲ್ಲಿ ಕ್ಷೇತ್ರದಲ್ಲಿ ಯಾರು ವಿಜಯ ಪಾತಾಕೆಯನ್ನು ಹಾರಿಸಲಿದ್ದಾರೆ ಎಂದು ತಿಳಿಯಲಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ವಿಶೇಶ್ವರ ಹೆಗಡೆ ಕಾಗೇರಿ ಮತ್ತು ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್‌ ಸ್ಪರ್ಧಿಸಿದ್ದು, ಇಂದು ಫಲಿತಾಂಶ ಯಾವಾಗ ಹೊರಬೀಳಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

Uttara Kaannada Lok Sabha Election 2024 Results LIVE Who will Win Kageri Vs Anjali Nimbalkar

ಬಿಜೆಪಿಯ ಭದ್ರಕೋಟೆಯಾಗಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್‌ ನಡುವೆ ಭಾರೀ ಜಿದ್ದಾಜಿದ್ದಿನ ಹಣಾಹಣೆ ಏರ್ಪಟ್ಟಿದೆ. 28 ವವರ್ಷಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿ ಬದಲಿಸಲಿದ್ದು, ಆರು ಬಾರಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಲಾಗಿದ್ದು, ಕಾಂಗ್ರೆಸ್‌ನಿಂದ ಖಾನಾಪುರ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಲ್ಲಿಂದ ಮೊದಲ ಬಾರಿ ಸ್ಪರ್ಧಿಸಿದ್ದಾರೆ.

1952ರಿಂದ ಕ್ಷೇತ್ರವನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಕಾಂಗ್ರೆಸ್‌ 1996ರಲ್ಲಿ ಸೋಲನುಭವಿಸಿದ್ದು, 1999ರಲ್ಲಿ ಪುನಃ ಗೆಲುವು ಸಾಧಿಸಿದರೂ 2004ರಿಂದ ಕ್ಷೇತ್ರ ಬಿಜೆಪಿಯ ತೆಕ್ಕೆಯಲ್ಲಿತ್ತು. ಬಿಜೆಪಿಯು ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆಲುವಿನತ್ತ ಸಾಗುತ್ತಾ ಬಂದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ 7,86,042 ಮತಗಳನ್ನು ಗಳಿಸುವ ಮೂಲಕ 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಈ ಮೂಲಕ 3,06,393 ಮತಗಳನ್ನು ಪಡೆದ ಜೆಡಿ (ಎಸ್)ನ ಆನಂದ್ ಅಸ್ನೋಟಿಕರ್ ಅವರನ್ನು ಅನಂತ್ ಕುಮಾರ್ ಹೆಗಡೆ ಸೋಲಿಸಿದರು. ಇನ್ನು ಈ ಕ್ಷೇತ್ರದಲ್ಲಿ 2019ರಲ್ಲಿ 74.10 ಮತದಾನವಾಗಿದೆ. ಒಟ್ಟಿನಲ್ಲಿ ಈ ಬಾರಿ ಬಿಜೆಪಿ ಭದ್ರಕೋಟೆಯನ್ನು ಹೊಡೆದು ತಾವು ಬೇರೂರಲು ಕಾಂಗ್ರೆಸ್‌ ಗ್ಯಾರಂಟಿಗಳ ಬಾಣಗಳನ್ನು ಬಿಟ್ಟಿದೆ.

ಇನ್ನು ಉತ್ತರ ಕನ್ನಡ ಲೋಕಸಭಾ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ಲೈವ್ ಅಪ್ಡೇಟ್‌ಗಾಗಿ ನೀವು ಒನ್‌ ಇಂಡಿಯಾ ಕನ್ನಡವನ್ನು ವೀಕ್ಷಣೆ ಮಾಡಬಹುದಾಗಿದೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 7,77,887, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 4,43,296 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 3,34,591 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 5,32,306, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 2,99,101 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 2,33,205 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 3,62,757, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,99,050ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,63,707 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 3,00,174, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,59,355 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,40,819 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 2,44,788, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,23,648 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,21,140 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 2,15,686 , ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,09,345 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,06,341 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 2,05,933, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 1,04,865 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,01,068 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 1,95,917 , ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 95,816 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 1,00,101 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 92,493, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 42,073 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 50,420 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು 1296 ನೋಟಾ ಮತಗಳು ಬಿದ್ದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 55,384, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 23,089 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 32,295 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು 758 ನೋಟಾ ಮತಗಳು ಬಿದ್ದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 43,454, ಕಾಂಗ್ರೆಸ್‌ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 17,856 ಮತಗಳನ್ನು ಪಡೆದಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿ 25,598 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು 644 ನೋಟಾ ಮತಗಳು ಬಿದ್ದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭವಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುನ್ನಡೆಯಲ್ಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+