ಕಾರವಾರ; ಬೇರೆ ಖಾತೆಯಿಂದ ಹೆಂಡತಿ ಖಾತೆಗೆ 2.69 ಕೋಟಿ ವರ್ಗಾಯಿಕೊಂಡ ಬ್ಯಾಂಕ್ ಉದ್ಯೋಗಿ
ಕಾರವಾರ, ಸೆಪ್ಟೆಂಬರ್, 13: ಕುಮಾರ್ ಬೋನಾಲ ಎಂಬಾತ ಯಲ್ಲಾಪುರ ತಾಲೂಕಿನ ಬ್ಯಾಂಕ್ ಆಫ್ ಬರೋಡಾದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ. ಆತ ಬೇರೆಯವರ ಖಾತೆಯಿಂದ ತನ್ನ ಹೆಂಡತಿ ಖಾತೆಗೆ 2.69 ಕೋಟಿ ರೂಪಾಯಿ ಜಮಾ ಮಾಡಿಕೊಂಡು ನಾಪತ್ತೆಯಾದ ಬೆನ್ನಲ್ಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಆದರೆ ಹಣ ಕ್ರೆಡಿಟ್ ಆಗಿದ್ದ ಖಾತೆಯಲ್ಲಿ ಸದ್ಯ ಝೀರೋ ಬ್ಯಾಲೆನ್ಸ್ ಇರುವುದು ತನಿಖೆ ವೇಳೆ ತಿಳಿದುಬಂದಿದೆ. ಇದೀಗ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಯಲ್ಲಾಪುರ ಬ್ಯಾಂಕ್ ಆಫ್ ಬರೋಡಾದಲ್ಲಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕುಮಾರ್ ಬೋನಾಲ ಎಂಬಾತ ಐದು ತಿಂಗಳ ಹಿಂದೆ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸೇರಿಕೊಂಡಿದ್ದ. ಸೆಪ್ಟೆಂಬರ್ 5ರವರೆಗೆ ಬ್ಯಾಂಕ್ ಸಿಬ್ಬಂದಿ ಲಾಗಿನ್ ಮೂಲಕ ಕರೆಂಟ್ ಅಕೌಂಟ್‌ನಿಂದ ತನ್ನ ಪತ್ನಿಯ ಹೆಸರಿನ ಖಾತೆಗೆ ಆರೋಪಿ ಹಣವನ್ನು ವರ್ಗಾಯಿಸಿಕೊಂಡಿದ್ದಾನೆ. ಈ ಬಗ್ಗೆ ಬ್ಯಾಂಕ್‌ನ ಇತರ ಅಧಿಕಾರಿಗಳಿಗೆ ವಾರದ ಬಳಿಕ ತಿಳಿದಿದ್ದು, ಅಷ್ಟರಲ್ಲಿ ಆರೋಪಿ ನಾಪತ್ತೆ ಆಗಿದ್ದ. ಇನ್ನು ಈ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಂಚನೆ ಪ್ರಕರಣ ದಾಖಲಾಗುವ ಕೆಲ ದಿನಗಳ ಹಿಂದೆ ಆರೋಪಿ ಕಾಣೆ ಆಗಿರುವ ಕುರಿತು ಪ್ರಕರಣ ದಾಖಲಾಗಿತ್ತು.
ಇನ್ನು ಆರೋಪಿತ ಕುಮಾರ್ ಯಾರಿಗೂ ಅನುಮಾನ ಬರದಂತೆ ಹಂತ ಹಂತವಾಗಿ ಹಣವನ್ನು ತನ್ನ ಹೆಂಡತಿ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಬಳಿಕ ಹಣವನ್ನು ವರ್ಗಾವಣೆ ಮಾಡಿಕೊಂಡ ಖಾತೆಯನ್ನು ಪರಿಶೀಲಿಸಿದಾಗ ಯಾವುದೇ ಹಣ ಇಲ್ಲದಿರುವುದು ತಿಳಿದಿದೆ. ಇನ್ನು ಸದ್ಯ ಯಲ್ಲಾಪುರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಾಪತ್ತೆ ಆಗಿರುವ ಕುಮಾರ್ ಎಂಬಾತನ ಪತ್ತೆಗಾಗಿ ಬಲೆ ಬೀಸಿದ್ದಾರೆ. ಆರೋಪಿಯನ್ನು ಬಂಧಿಸಿದ ನಂತರ, ಹಣವನ್ನು ಎಲ್ಲಿ ಇಟ್ಟಿದ್ದಾನೆ ಎನ್ನುವ ಮಾಹಿತಿಯನ್ನು ಕಲೆಹಾಕಲಾಗುತ್ತದೆ. ಮತ್ತೆ ಹಣವನ್ನು ಆರೋಪಿಯಿಂದ ಭರಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ನಾ ಫೆನ್ನೇಕರ್ ತಿಳಿಸಿದ್ದಾರೆ.

ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದು ಏಕೆ?
ಮತ್ತೊಂದು ಪ್ರಕರಣದಲ್ಲಿ ಆರೋಪಿಯೋರ್ವ ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ. ಆತ ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ಕಾರವಾರ ತಾಲ್ಲೂಕಿನ ಸದಾಶಿವಗಡದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಅವರ ಮಾಹಿತಿಯಂತೆ ಸಿಬ್ಬಂದಿಗಳು ಗೋವಾ ಮದ್ಯ ಸಾಗಿಸುತ್ತಿದ್ದಾ ಕಾರನ್ನು ಹಿಂಬಾಲಿಸಿದ್ದಾರೆ. ವರಿಷ್ಠಾಧಿಕಾರಿ ಎಸ್.ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್‌ಟೇಬಲ್ ರಾಘವೇಂದ್ರ ಜಿ,, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ಭಗವಾನ ಗಾಂವಕರ, ಸಂತೋಷ್ ಕುಮಾರ್, ಮಹಾದೇವ ಸಿದ್ದಿ ಅವರ ತಂಡವನ್ನು ರಚಿಸಲಾಗಿತ್ತು.

ಖಚಿತ ಮಾಹಿತಿ ಆಧಾರದಲ್ಲಿ ಗೋವಾ ರಾಜ್ಯದಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ, ಹ್ಯಂಡೈ ವೆರ್ನ ಕಾರನ್ನು ಪರಿಶೀಲಿಸಲು ಸದಾಶಿವಗಡದ ದೇವಭಾಗ ಕ್ರಾಸ್‌ನಲ್ಲಿ ಬ್ಯಾರಿಕೇಡ್ ಹಾಕಿ ನಿಂತಿದ್ದರು. ಪೊಲೀಸರನ್ನು ದೂರದಿಂದಲೇ ಕಂಡು ಭಯಭೀತನಾದ ಚಾಲಕ ಕಾರನ್ನು ಹೆದ್ದಾರಿಯಲ್ಲೇ ಬಿಟ್ಟು ಪರಾರಿ ಆಗಿದ್ದಾನೆ. ಬಳಿಕ ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಸುಮಾರು 1.5 ಲಕ್ಷ ಬೆಲೆಯ 27 ಪಾಲಿಥಿನ್ ಚೀಲಗಳಲ್ಲಿ 770 ಲೀಟರ್ ಗೋವಾ ರಾಜ್ಯದ ಮದ್ಯದ ಬಾಟಲಿಗಳು ಪತ್ತೆ ಆಗಿವೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications