Uttara Kannada Lok Sabha Election 2024 Result: ಬಿಜೆಪಿ ಭದ್ರಕೋಟೆ ಉಳಿಯುತ್ತಾ? ಉರುಳುತ್ತಾ?

Uttara Kannada Lok Sabha Election 2024 Result: ಉತ್ತರ ಕನ್ನದ ಲೋಕಸಭಾ ಕ್ಷೇತ್ರಕ್ಕೆ ಮೇ 07ರಂದು ಮತದಾನ ನಡೆದಿದ್ದು, ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿದೆ. ಹಾಗಾದರೆ ಈ ಕ್ಷೇತ್ರದಿಂದ ಯಾವ್ಯಾವ ಪಕ್ಷಗಳಿಂದ ಯಾರು ಸ್ಪರ್ಧೆ ಮಾಡಿದ್ದರು ಹಾಗೂ ಯಾರಿಗೆ ಜಾಸ್ತಿ ಗೆಲುವಿನ ವರ್ಚಸಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿಂದ ಡಾ.ಅಂಜಲಿ ನಿಂಬಾಳ್ಕರ್ ಅವರು ಸ್ಪರ್ಧಿಸಿದ್ದರು. ಇನ್ನು ಈ ಲೋಕಸಭಾ ಕ್ಷೇತ್ರಕ್ಕೆ ಮೇ 07ರಂದು ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Uttara Kannada Lok Sabha Results 2024 Who Will Win Vishweshwar Hegde Kageri Or Anjali Nimbalkar

ಬಿಜೆಪಿಯ ಭದ್ರಕೋಟೆಯಾಗಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್‌ ನಡುವೆ ಭಾರೀ ಜಿದ್ದಾಜಿದ್ದಿನ ಹಣಾಹಣೆ ಏರ್ಪಟ್ಟಿದೆ. 28 ವವರ್ಷಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿ ಬದಲಿಸಲಿದ್ದು, ಆರು ಬಾರಿ ಶಾಸಕರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್‌ನಿಂದ ಖಾನಾಪುರ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಲ್ಲಿಂದ ಮೊದಲ ಬಾರಿ ಸ್ಪರ್ಧಿಸಿದ್ದಾರೆ

1952ರಿಂದ ಕ್ಷೇತ್ರವನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಕಾಂಗ್ರೆಸ್‌ 1996ರಲ್ಲಿ ಸೋಲನುಭವಿಸಿದ್ದು, 1999ರಲ್ಲಿ ಪುನಃ ಗೆಲುವು ಸಾಧಿಸಿದರೂ 2004ರಿಂದ ಕ್ಷೇತ್ರ ಬಿಜೆಪಿಯ ತೆಕ್ಕೆಯಲ್ಲಿತ್ತು.

ಬಿಜೆಪಿಯು ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆಲುವಿನತ್ತ ಸಾಗುತ್ತಿತ್ತು. ಆದರೆ, ಈ ಬಾರಿ ಕಾಂಗ್ರೆಸ್‌ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿದ್ದು, ಈ ಮೂಲಕ ಗೆಲುವಿನ ನಿರೀಕ್ಷೆಯಲ್ಲಿದೆ.

ಉತ್ತರ ಕನ್ನಡ ಕರ್ನಾಟಕ ಲೋಕಸಭಾ ಕ್ಷೇತ್ರವು ಭಾರತದ ರಾಜಕಾರಣದಲ್ಲಿ ಹೆಸರುವಾಸಿಯಾದ ರಾಜಕೀಯ ಶಕ್ತಿ ಕೇಂದ್ರವಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ, ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಯಿತು. ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ 7,86,042 ಮತಗಳನ್ನು ಗಳಿಸುವ ಮೂಲಕ 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಈ ಮೂಲಕ 3,06,393 ಮತಗಳನ್ನು ಪಡೆದ ಜೆಡಿ (ಎಸ್)ನ ಆನಂದ್ ಅಸ್ನೋಟಿಕರ್ ಅವರನ್ನು ಅನಂತ್ ಕುಮಾರ್ ಹೆಗಡೆ ಸೋಲಿಸಿದರು. ಇನ್ನು ಈ ಕ್ಷೇತ್ರದಲ್ಲಿ 2019ರಲ್ಲಿ 74.10 ಮತದಾನವಾಗಿದೆ. ಒಟ್ಟಿನಲ್ಲಿ ಈ ಬಾರಿ ಬಿಜೆಪಿ ಭದ್ರಕೋಟೆಯನ್ನು ಹೊಡೆದು ತಾವು ಬೇರೂರಲು ಕಾಂಗ್ರೆಸ್‌ ಗ್ಯಾರಂಟಿಗಳ ಬಾಣಗಳನ್ನು ಬಿಟ್ಟಿದೆ. ಇದು ಪ್ರಯೋಜನಾವಾಗಲಿದ್ಯಾ ಎಂದು ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+