ಕಾರವಾರ: ಗ್ರಾಮ ಆಡಳಿತಾಧಿಕಾರಿಗಳ ದಿಢೀರ್ ಅನಿರ್ದಿಷ್ಟಾವಧಿ ಮುಷ್ಕರ ಯಾಕೆ?
ಕಾರವಾರ, ಫೆಬ್ರವರಿ 12: ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗಾಗಿ ಕಳೆದ 2024 ಸೆಪ್ಟಂಬರ್‌ನಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡ ಸಮಯದಲ್ಲಿ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಯಾವುದೇ ಬೇಡಿಕೆ ಪೂರೈಸದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಉತ್ತರ ಕನ್ನಡ ಗ್ರಾಮ ಆಡಳಿತಾಧಿಕಾರಿಗಳ ತಾಲೂಕಾ ಘಟಕದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದೆ.

ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್‌ಟಾಪ್, ಅದಕ್ಕೆ ಅವಶ್ಯಕವಾಗಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಉಂಟಾಗುತ್ತಿದೆ. ಅದ್ದರಿಂದ ನಮಗೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಇಂಟರ್‌ನೆಟ್ ಸೌಲಭ್ಯ ನೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ಬೇಕು. ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆ.ಸಿ.ಎಸ್.ಆರ್ ನಿಯಮ 15ಎ ರ ಉಪಖಂಡ(2)ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿರುತ್ತದೆ. ಆದ್ದರಿಂದ ಈ 16ಎ ಉಪಖಂಡ(2)ನ್ನು ಮರುಸ್ಥಾಪಿಸುವಂತೆ ಅಥವಾ ಕಂದಾಯ ಇಲಾಖೆಯಲ್ಲಿ ಇತರೆ ಎಲ್ಲಾ ಇಲಾಖೆಗಳಲ್ಲಿ ಮಾಡಿರುವಂತೆ ವರ್ಗಾವಣೆಯ ಮಾರ್ಗಸೂಚಿಯನ್ನು ರಚಿಸುವಂತೆ ಸಂಘದ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುತ್ತದೆ.
ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ವಾರಸುದಾರರ ಪ್ರಮಾಣ ಪತ್ರ. ಮರಣ ಪ್ರಮಾಣ ಪತ್ರ, ಮತ್ತು ಇತರೆ ದಾಖಲೆಗಳಿಲ್ಲದೇ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಚಾಲನೆ ನೀಡುತ್ತಿರುವುದನ್ನು ಕೈಬಿಡುವಂತೆ ಸೇರಿದಂತೆ, ಇನ್ನೂ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಹಿಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕಳೆದ ವರ್ಷ ಸೆ.26 ರಿಂದ ಹಮ್ಮಿಕೊಳ್ಳಲಾಗಿತ್ತು.
ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅಕ್ಟೋಬರ್ 3ರಂದು ಪ್ರತಿಭಟನೆ ವಾಪಸ್ ತೆಗೆದುಕೊಳ್ಳಲಾಯಿತು. ಆದರೆ ನಮಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಹೀಗಾಗಿ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ನಿರ್ಣಯದಂತೆ ಮತ್ತೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಜಿಲ್ಲಾ ಅಧ್ಯಕ್ಷ ಚಾಂದಬಾಷಾ ತಿಳಿಸಿದ್ದಾರೆ.
ಮುಷ್ಕರ ಸ್ಥಳಕ್ಕೆ ಭಟ್ಕಳ ಸರ್ಕಾರಿ ನೌಕರರು ಸಂಘದ ಅಧ್ಯಕ್ಷ ಎಂ.ಎನ್ ನಾಯ್ಕ ಭೇಟಿ ನೀಡಿ ಮುಷ್ಕರ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ತಾಲೂಕು ಸಂಘದ ಅಧ್ಯಕ್ಷೆ ಲತಾ ನಾಯ್ಕ, ಗ್ರಾಮ ಆಡಳಿತಾಧಿಕಾರಿಗಳಾದ ಚರಣ ಗೌಡ, ಗಣೇಶ ಕುಲಾಲ್, ವೀಣಾ ನಾಯ್ಕ, ತಿಪ್ಪಣ್ಣ, ವಿಜೇತ್, ದಿವ್ಯಾ, ವಿನುತ, ಬೀಮಣ್ಣ, ಶಬಾನ ಬಾನು, ದೀಕ್ಷಿತ, ಸುನೀಲ್, ದೀಪ್ತಿ, ವೀಣಾ, ಐಶ್ವರ್ಯ, ಅಶ್ವಿನಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications