ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಷ್ಯಾದ ಅತಿ ದೊಡ್ಡ ವಿಮಾನ ವಾಹಕ ಯುದ್ಧ ನೌಕೆ ವಿಕ್ರಮಾದಿತ್ಯ ವೀಕ್ಷಣೆಗೆ ಮುಕ್ತ ಅವಕಾಶ

|
Google Oneindia Kannada News

ಕಾರವಾರ, ಡಿಸೆಂಬರ್ 18: ನೌಕಾ ಸಪ್ತಾಹ ಆಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಡಿಸೆಂಬರ್ 22ರಂದು ಐಎನ್ ‍ಎಸ್ ವಿಕ್ರಮಾದಿತ್ಯ ವೀಕ್ಷಣೆಗಾಗಿ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ನೌಕಾನೆಲೆ ನೋಡಲು ಬಂದರು ಸಾವಿರಾರು ಜನರುನೌಕಾನೆಲೆ ನೋಡಲು ಬಂದರು ಸಾವಿರಾರು ಜನರು

ವೀಕ್ಷಕರ ಅನುಕೂಲಕ್ಕಾಗಿ ಕೆಲವು ಭದ್ರತಾ ನಿಯಮಗಳು ಜಾರಿಯಲ್ಲಿದ್ದು, ಅರಗಾ ಮುಖ್ಯ ಗೇಟ್ ನಿಂದ ಮಾತ್ರ ಒಳಪ್ರವೇಶಕ್ಕೆ ಅನುಮತಿ ಇದೆ. ವೀಕ್ಷಕರು ತಮ್ಮ ಗುರುತಿನ ಚೀಟಿಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಸರ್ಕಾರದಿಂದ ನೀಡಿದ ಯಾವುದೇ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ನೌಕಾನೆಲೆಯ ಒಳಗೆ ಮೊಬೈಲ್ ಫೋನ್, ಕ್ಯಾಮೆರಾ, ಆಡಿಯೊ ಅಥವಾ ವೀಡಿಯೋ ರೆಕಾರ್ಡಿಂಗ್ ಸಾಧನ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ ‍ಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿಪಡಿಸಿದ ಸ್ಥಳದಲ್ಲಿಯೇ ನಿಲ್ಲಿಸಬೇಕು. ಯಾವುದೇ ಕಾರಣಕ್ಕೂ ನೌಕಾನೆಲೆಯ ಒಳಗಡೆ ವಾಹನ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

Vikramaditya Aircraft Open To View In Karwar

ಈ ಸಂದರ್ಭದಲ್ಲಿ ವೀಕ್ಷಕರು ನೌಕಾಪಡೆಯ ಅಧಿಕಾರಿಗಳೊಂದಿಗೆ ಸಹಕರಿಸಿ ಸಪ್ತಾಹ ಆಚರಣೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ನೌಕಾನೆಲೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಗಿಲ್ ವಿಜಯ ದಿವಸ್; ಕಾರವಾರದ ಕದಂಬ ನೌಕಾನೆಲೆ ವೀಕ್ಷಣೆಗೆ ನಾಳೆ ಮುಕ್ತ ಅವಕಾಶಕಾರ್ಗಿಲ್ ವಿಜಯ ದಿವಸ್; ಕಾರವಾರದ ಕದಂಬ ನೌಕಾನೆಲೆ ವೀಕ್ಷಣೆಗೆ ನಾಳೆ ಮುಕ್ತ ಅವಕಾಶ

ಏಷ್ಯಾದಲ್ಲಿಯೇ ಅತಿ ದೊಡ್ಡ ವಿಮಾನ ವಾಹಕ ಯುದ್ಧ ನೌಕೆಯಾದ ವಿಕ್ರಮಾದಿತ್ಯ, ಸುಮಾರು 44,500 ಟನ್ ತೂಕ, 284 ಮೀಟರ್ ಉದ್ದ, 60 ಮೀಟರ್ ಎತ್ತರ ಇದೆ. 34 ಯುದ್ಧ ವಿಮಾನ ಹಾಗೂ ಹೆಲಿಕಾಪ್ಟರ್ ಗಳನ್ನು ಏಕಕಾಲದಲ್ಲಿ ಹೊರುವ ಸಾಮರ್ಥ್ಯ ಇದಕ್ಕಿದೆ.

English summary
The INS Vikramaditya is open to the public, including schoolchildren, on December 22, with the aim of raising awareness among the public as part of the Nauka Sapthaha Celebration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X