ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರದಲ್ಲಿ ಮತ ಎಣಿಕೆ ಆರಂಭ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಮೇ 23: ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 23ರಂದು ನಡೆದ ಚುನಾವಣೆಯ ಮತ ಎಣಿಕೆಯು ಕುಮಟಾದ ಎ.ವಿ.ಬಾಳಿಗಾ ಕಾಲೇಜಿನಲ್ಲಿ ಈಗಷ್ಟೇ ಆರಂಭಗೊಂಡಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರವು ಜಿಲ್ಲೆಯ ಆರು ಮತ್ತು ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಮತ ಎಣಿಕೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 1,922 ಮತಗಟ್ಟೆಗಳಿವೆ.

ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE:ಮೈತ್ರಿ ಅಭ್ಯರ್ಥಿ ನಿಖಿಲ್ ಮುನ್ನಡೆಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE:ಮೈತ್ರಿ ಅಭ್ಯರ್ಥಿ ನಿಖಿಲ್ ಮುನ್ನಡೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3,218 ಅಂಚೆ ಮತ್ತು ಸೇವಾ ಮತಗಳಿವೆ. ಇವುಗಳ ಎಣಿಕೆ ಕಾರ್ಯ ಈಗಷ್ಟೇ ಆರಂಭವಾಗಿದೆ.

 vote counting started in karwar

ಮತ ಎಣಿಕೆಗೆ 'ಡಿ' ದರ್ಜೆಯವರನ್ನು ಹೊರತುಪಡಿಸಿ 392 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 13 ಅಭ್ಯರ್ಥಿಗಳು ಇರುವ ಈ ಕ್ಷೇತ್ರದಲ್ಲಿ ಒಟ್ಟು 15.52 ಲಕ್ಷ ಮತದಾರರು ಇದ್ದಾರೆ. ಇದರಲ್ಲಿ 11.49 ಲಕ್ಷ ಮತಗಳು ಚಲಾವಣೆ ಆಗಿವೆ. ಶೇಕಡಾವಾರು 74.07ರಷ್ಟು ಮತದಾನ ಈ ಬಾರಿ ಆಗಿದೆ.

ಇಲ್ಲಿನ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದ್ದ ವಿದ್ಯುನ್ಮಾನ ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಅಡಗಿದ್ದು, ಗೆಲುವು ಯಾರ ಪಾಲಿಗೆ ಎಂಬ ಒಂದು ತಿಂಗಳ ಪ್ರಶ್ನೆಗೆ ಉತ್ತರ ಸಿಗಲು ಇನ್ನು ಕೆಲವೇ ಗಂಟೆಗಳು ದಿನ ಬಾಕಿಯಿದೆ.

English summary
The counting of votes for the Lok Sabha election of 2019 is just beginning at AV Boliga College in Kumta. The Uttar Kannada Lok Sabha constituency consists of two assembly constituencies in the district and six in Belgaum district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X