ಗೆದ್ದವರಿಗೆ ಬಹುಮಾನ, ಸೋತವರ ಬಗ್ಗೆ ಪಕ್ಷ ತೀರ್ಮಾನ: ಡಿಸಿಎಂ

ಕಾರವಾರ, ಡಿಸೆಂಬರ್ 10: 'ಚುನಾವಣೆಯಲ್ಲಿ ಗೆದ್ದವರಿಗೆ ಸರ್ಕಾರದಲ್ಲಿ ಬಹುಮಾನ ಇದೆ. ಸೋತವರಿಗೆ ಏನು ಮಾಡಬೇಕು ಎನ್ನುವುದನ್ನು ಪಕ್ಷ ನಿರ್ಧರಿಸಲಿದೆ' ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಹೇಳಿದರು.

ಶಿರಸಿಯಲ್ಲಿ ನಡೆಯುತ್ತಿದ್ದ ಸಮಾರಂಭವೊಂದರಲ್ಲಿ ಭಾಗವಹಿಸಲು ಗೋವಾದ ಮೂಲಕ ಕಾರವಾರಕ್ಕೆ ಬಂದಿದ್ದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು.

'ಚುನಾವಣೆಯಲ್ಲಿ ಹದಿನೈದಕ್ಕೆ ಹದಿನೈದು ಸ್ಥಾನ ಗೆಲ್ಲುತ್ತೇವೆ ಎನ್ನುವ ನಿರೀಕ್ಷೆ ಇತ್ತು. ಹನ್ನೆರಡು ಸ್ಥಾನದಲ್ಲಿ ಗೆಲುವನ್ನು ಸಾಧಿಸುತ್ತೇವೆ ಎಂದು ಖಚಿತವಿತ್ತು. ಅದರಂತೆ ಗೆಲುವು ಪಡೆದಿದ್ದೇವೆ' ಎಂದರು.

Winners Rewarded By Government Said Dcm Ashwath Narayan In Karwar

'ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟಿರುವುದು ಒಳ್ಳೆಯ ಕ್ರಮ. ಸೋಲಿನ ಹೊಣೆ ಹೊತ್ತು ರಾಜೀನಾಮೆ‌ ಕೊಡುವುದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆ. ಚುನಾವಣೆ ನಂತರ ಯಡಿಯೂರಪ್ಪ ರಾಜೀನಾಮೆ‌ ಕೊಡ್ತಾರೆ ಎಂದು ಸಿದ್ದರಾಮಯ್ಯ, ಗುಂಡೂರಾವ್ ಅವರೇ ಹೇಳಿದ್ದರು. ಆದರೆ, ಸೋಲು ಅವರನ್ನೇ ಸುತ್ತಿಕೊಂಡು ರಾಜೀನಾಮೆ ಕೊಡುವಂತಾಗಿದೆ' ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+