• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಬ್ಲಾಸ್ಟಿಂಗ್ ಅನುಮತಿ ಇಲ್ಲದೇ ಗಣಿಗಾರಿಕೆ ಮಾಡುವಂತಿಲ್ಲ''

|

ಕಾರವಾರ, ಜನವರಿ 27: ಕಲ್ಲು ಕ್ವಾರಿ ಮಾಡುವವರಿಗೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಬಳಿ ಬ್ಲಾಸ್ಟಿಂಗ್ ಅನುಮತಿಯನ್ನು ಪಡೆಯಲೇಬೇಕು. ಒಂದೊಮ್ಮೆ ಬ್ಲಾಸ್ಟಿಂಗ್ ಅನುಮತಿ ಪಡೆಯದೇ ಗಣಿಗಾರಿಕೆ ಚಟುವಟಿಕೆ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅನುಮತಿಯಿಲ್ಲ. ಒಂದೊಮ್ಮೆ ಅಕ್ರಮ ಗಣಿಗಾರಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಅಕ್ರಮ ಕಲ್ಲು ಕ್ವಾರಿಗಳಿಗೆ ಮೂಗುದಾರ ಹಾಕಲು ಮುಂದಾದ ಉತ್ತರ ಕನ್ನಡ ಜಿಲ್ಲಾಡಳಿತಅಕ್ರಮ ಕಲ್ಲು ಕ್ವಾರಿಗಳಿಗೆ ಮೂಗುದಾರ ಹಾಕಲು ಮುಂದಾದ ಉತ್ತರ ಕನ್ನಡ ಜಿಲ್ಲಾಡಳಿತ

ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟದ ನಂತರ ಜಿಲ್ಲೆಯಲ್ಲೂ ಗಣಿಗಾರಿಕೆಯ ಮೇಲೆ ಕಣ್ಣಿಡಲಾಗಿದೆ. ಈಗಾಗಲೇ ಅಧಿಕಾರಿಗಳ ತಂಡವನ್ನ ರಚಿಸಿದ್ದು, ಎಲ್ಲಾ ಗಣಿಗಾರಿಕೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅನುಮತಿಯನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು. ಎಲ್ಲೇ ಗಣಿಗಾರಿಕೆ ಮಾಡುವ ಸ್ಥಳದಲ್ಲಿ ಜಿಲ್ಲಾಧಿಕಾರಿಗಳಿಂದ ಬ್ಲಾಸ್ಟಿಂಗ್ ಅನುಮತಿ ಪಡೆಯಲೇಬೇಕು ಎಂದು ಅವರು ತಿಳಿಸಿದ್ದಾರೆ.

   ಅಂಗಡಿಗಳ ಮುಂದೆ ರಾರಾಜಿಸಲಿದೆ ಕನ್ನಡ ಫಲಕ-ಇಲ್ಲದಿದ್ರೆ Trade License Cancel ! | Oneindia Kannada

   ಬ್ಲಾಸ್ಟಿಂಗ್ ಅನುಮತಿ ಪಡೆದ ನಂತರವೂ ಸ್ಪೋಟವನ್ನು ಪರಿಣಿತ ತಂಡದಿಂದಲೇ ಮಾಡಿಸಬೇಕು. ಕೆಲವರು ಅನುಭವ ಇಲ್ಲದಿರುವವರನ್ನು ಬಳಸಿಕೊಂಡು ಸ್ಪೋಟ ಮಾಡುವ ಬಗ್ಗೆ ತಿಳಿದಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ. ಪೊಲೀಸರ ತಂಡವನ್ನು ಸಹ ಅಕ್ರಮ ಗಣಿಗಾರಿಕೆ ತಡೆಯಲು ಮಾಡಿದ್ದು, ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಜಿಲ್ಲಾಡಳಿತ ಹದ್ದಿನ ಕಣ್ಣಿಟ್ಟಿದೆ ಎಂದಿದ್ದಾರೆ.

   English summary
   Miners must obtain blasting permission from the District Collectors.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X