ಶಿರಸಿ-ಕುಮಟಾ ರಸ್ತೆ ಅಗಲೀಕರಣ; ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ಕಾರವಾರ, ಡಿಸೆಂಬರ್ 24: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆ ಅಗಲೀಕರಣವನ್ನು ವಿರೋಧಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಯೋಜನೆಗಾಗಿ ಸುಮಾರು 2 ಲಕ್ಷ ಮರಳನ್ನು ಕಡಿಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಎನ್‌ಎಚ್‌ಎಐ) 5.5 ಮೀಟರ್ ಇರುವ ಶಿರಸಿ-ಕುಮಟಾ ರಸ್ತೆಯನ್ನು 18 ಮೀಟರ್ ಅಗಲ ಮಾಡುವ ಕಾಮಗಾರಿ ಕೈಗೊಳ್ಳಲಿದೆ. ಈ ಯೋಜನೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ.

ಅತಿ ಕಡಿಮೆ ಸಂಚಾರ ದಟ್ಟಣೆ ಇರುವ ಈ ರಸ್ತೆ ನಿತ್ಯ ಹರಿದ್ವರ್ಣದ ಪಶ್ಚಿಮ ಘಟ್ಟದ ದಟ್ಟ ಕಾಡಿನ ನಡುವೆ ಹಾದು ಹೋಗುತ್ತದೆ. ಅವೈಜ್ಞಾನಿಕವಾಗಿ ಈ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆ ರೂಪಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Writ Petition Karnataka High Court Against Sirsi Kumta Road Widening

ಶಿರಸಿ-ಕುಮಟಾ ರಸ್ತೆ ಅಗಲೀಕರಣ ಯೋಜನೆಗೆ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ. ಆದ್ದರಿಂದ, ಇಂತಹ ಯೋಜನೆಗೆ ಅನುಮತಿ ನೀಡಬಾರದು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಶಿರಸಿ-ಕುಮಟಾ ರಸ್ತೆ ಅಗಲೀಕರಣ ಹಿನ್ನಲೆಯಲ್ಲಿ ಅಕ್ಟೋಬರ್ 12ರಿಂದಲೇ ರಸ್ತೆಯಲ್ಲಿ ವಾಹನ ಸಂಚಾರವನ್ನು ಒಂದೂವರೆ ವರ್ಷದ ಅವಧಿಗೆ ನಿಷೇಧಿಸಲಾಗಿದೆ. ರಸ್ತೆಯ ಅಕ್ಕಪಕ್ಕದಲ್ಲಿರುವ ಗ್ರಾಮಗಳ ಜನರ ಸಂಚಾರಕ್ಕೆ ಪರ್ಯಾಯ ರಸ್ತೆಗಳ ಹುಡುಕಾಟ ಮುಂದುವರೆದಿದೆ.

ಈ ರಸ್ತೆಯನ್ನು ಅಗಲೀಕರಣ ಮಾಡವುದಕ್ಕೆ ಭಾರೀ ವಿರೋಧವೂ ವ್ಯಕ್ತವಾಗುತ್ತಿದೆ. ವಾಹನ ದಟ್ಟಣೆಯೇ ಇಲ್ಲದ ರಸ್ತೆಯ ಅಗಲೀಕರಣ ಏಕೆ? ಎಂಬುದು ಜನರ ಪ್ರಶ್ನೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+