ಯಲ್ಲಾಪುರ ಭೂಕುಸಿತ: ಯುವತಿಯ ಮದುವೆ ಕನಸು "ಮಣ್ಣು'ಪಾಲು
ಕಾರವಾರ, ಮಾರ್ಚ್ 8: ಆಕೆಯ ಮದುವೆಗೆಂದು ಮನೆಯವರು ಬೆಳಿಗ್ಗೆಯಷ್ಟೇ ಕೊಲ್ಲಾಪುರಕ್ಕೆ ತೆರಳಿ, ಹುಡುಗನ ಮನೆಯಲ್ಲಿ ಮಾತುಕತೆ ನಡೆಸಿ ಬಂದಿದ್ದರು. ಏಪ್ರಿಲ್‌ನಲ್ಲಿ ಮದುವೆಗೆ ದಿನ ನಿಗದಿಪಡಿಸಿದ್ದಲ್ಲದೇ, ಆಕೆಯ ಮದುವೆಗಾಗಿ ಆಭರಣಗಳನ್ನೂ ಖರೀದಿಸಿಟ್ಟಿದ್ದರು. ಆದರೆ ವಿಧಿಯ ಆಟವೇ ಬೇರೆ ಇತ್ತು. ಕೂಲಿ ಕೆಲಸಕ್ಕೆಂದು ಇತರ ಏಳು ಮಂದಿ ಕಾರ್ಮಿಕರೊಂದಿಗೆ ಕೆಲಸಕ್ಕೆ ತೆರಳಿದಾಕೆ ಧರೆ ಕುಸಿದು ಮಸಣದ ಹಾದಿ ಹಿಡಿದಿದ್ದಾಳೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಇಡಗುಂದಿಯ ಸಂತೇಬೈಲ್‌ನಲ್ಲಿ ಸೋಮವಾರ (ಮಾ.8) ತೋಟದ ಕೆಲಸ ಮಾಡುವಾಗ ಧರೆ ಕುಸಿದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಭಾಗ್ಯಶ್ರೀ ಎಡಗೆ ತನ್ನ ಕುಟುಂಬದ ನಿರ್ವಹಣೆಗಾಗಿ ಕೂಲಿ ಕೆಲಸ ಮಾಡಿಕೊಂಡಿದ್ದವಳಾಗಿದ್ದು, ಇದೀಗ ಈಕೆಯ ಸಾವಿನಿಂದಾಗಿ ಕುಟುಂಬದ ಆಧಾರ ಸ್ತಂಭವನ್ನೇ ಕಳೆದುಕೊಂಡಂತಾಗಿದೆ.

ನೀರು ಕುಡಿಯಲು ಕುಳಿತಿದ್ದರು
ಕಳೆದ ಹದಿನೈದು ದಿನಗಳಿಂದ ಯಲ್ಲಾಪುರ ತಾಲೂಕಿನ ಇಡಗುಂದಿ ಸಂತೇಬೈಲ್‌ನ ಮಂಜುನಾಥ ಭಟ್ಟ ಎನ್ನುವವರ ತೋಟದಲ್ಲಿ ಈ ಏಳು ಮಂದಿ ಕೆಲಸ ಮಾಡುತ್ತಿದ್ದರು. ಪ್ರತಿ ದಿನ ಬೆಳಿಗ್ಗೆ ಗೌಳಿವಾಡದಿಂದ ಜೀಪಿನಲ್ಲಿ ಬಂದು ತೋಟದಲ್ಲಿ ಕೆಲಸ ಮಾಡಿ ವಾಪಸ್ಸು ಅದೇ ಜೀಪಿನಲ್ಲಿ ಮನೆಗಳಿಗೆ ತೆರಳುತ್ತಿದ್ದರು. ಸೋಮವಾರ ಕೆಲಸಕ್ಕೆ ಬಂದವರಲ್ಲಿ ಮೂವರು ಧರೆಯಿಂದ ಸ್ವಲ್ಪವೇ ದೂರದಲ್ಲಿ ಕುಳಿತಿದ್ದರೆ, ನಾಲ್ವರು ತೆರವು ಮಾಡಿದ್ದ ಧರೆಯಲ್ಲಿ ಉಳಿದಿದ್ದ ಅಲ್ಪಸ್ವಲ್ಪ ಗುಡ್ಡದ ಮಣ್ಣಿನ ಕೆಳಗೆ ನೀರು ಕುಡಿದು, ಬಿಸಿಲಿನಿಂದ ಆಶ್ರಯ ಪಡೆಯಲೆಂದು ಕುಳಿತಿದ್ದರು. ಇದೇ ವೇಳೆಗೆ ಧರೆ ಏಕಾಏಕಿ ನಾಲ್ವರ ಮೇಲೂ ಕುಸಿದಿದೆ.

ಒಂದೇ ಕುಟುಂಬದ ಮೂವರು ಸಾವು
ಗೌಳಿವಾಡದ ಬಡ ಗೌಳಿ ಸಮುದಾಯದವರು ಹೆಚ್ಚೇನೂ ವಿದ್ಯಾಭ್ಯಾಸ ಬಲ್ಲವರಲ್ಲ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುವವರು. ಅದರಂತೆ ತೋಟಕ್ಕೆ ಕೆಲಸಕ್ಕೆಂದು ಬಂದಿದ್ದ ಏಳು ಮಂದಿಯಲ್ಲಿ ಮೃತಪಟ್ಟ ಲಕ್ಷ್ಮೀ (38), ಸಂತೋಷ್ (18) ಹಾಗೂ ಮಾಳು ಡೋಯಿಪಡೆ (21) ಮೂವರೂ ಒಂದೇ ಕುಟುಂಬದವರು. ಮಂಗಳವಾರ ಗೌಳಿವಾಡದ ಗ್ರಾಮ ದೇವರಾದ ವಿಠಲ ರುಕ್ಮಾಯಿ ಜಾತ್ರೆ ಇತ್ತು. ಸಂಪ್ರದಾಯದ ಪ್ರಕಾರ ಯಾರೂ ಕೂಡ ಕೆಲಸಕ್ಕೆ ಅಥವಾ ಊರಿನಿಂದ ಹೊರ ಹೋಗದೆ, ಜಾತ್ರೆಯ ಸಿದ್ಧತೆಯಲ್ಲಿ ಭಾಗಿಯಾಗಬೇಕಿತ್ತು. ಆದರೂ ಇಂದು ಕೆಲಸಕ್ಕೆಂದು ಏಳು ಮಂದಿಯೂ ಬಂದಿದ್ದರು.

ಸಚಿವ ಶಿವರಾಮ ಹೆಬ್ಬಾರ್ ಸಂತಾಪ
ಕೂಲಿ ಕಾರ್ಮಿಕರ ಸಾವಿಗೆ ಕಾರ್ಮಿಕ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ಸೂಕ್ತ ಪರಿಹಾರವನ್ನು ಒದಗಿಸಲಾಗುವುದು. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಅಗಲಿಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಅವರು ತಿಳಿಸಿದ್ದಾರೆ.
Recommended Video

ಮೂವರು ಚಿಕ್ಕ ವಯಸ್ಸಿನವರು
ಧರೆ ಕುಸಿತದಿಂದ ಮೃತಪಟ್ಟವರಲ್ಲಿ ಮೂವರು ಚಿಕ್ಕ ವಯಸ್ಸಿನವರಾಗಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಪಾಲಕರು ಹೆಚ್ಚು ಪ್ರಯತ್ನಿಸಬೇಕೇ ಹೊರತು ಅವರಿಂದ ಕೂಲಿ ಕೆಲಸ ಮಾಡಿಸಬಾರದು. ಕೂಲಿಯ ಸಮಯದಲ್ಲೂ ಮಾಲೀಕರು ಕಾರ್ಮಿಕರ ಸುರಕ್ಷತೆಗೆ ಕ್ರಮ ವಹಿಸಿರಬೇಕು ಎಂದು ಕಿರವತ್ತಿ ಗ್ರಾಮ ಪಂಚಾಯತಿ ಹೊಸಾಳಿ ವಾರ್ಡ್ ಸದಸ್ಯ ಸುನೀಲ್ ಕಾಂಬ್ಳೆ ಆಗ್ರಹಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications