ಕೋಲಾರ; ದಾಖಲೆ ಇಲ್ಲದ 2 ಕೋಟಿ ಹಣ ಪೊಲೀಸರ ವಶಕ್ಕೆ

ಕೋಲಾರ, ಸೆಪ್ಟೆಂಬರ್ 01: ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ದಾಖಲೆ ಇಲ್ಲದ ಹಣವನ್ನು ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ಜಪ್ತಿ ಮಾಡಲಾಗಿದೆ. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Recommended Video

      China ಗಡಿಗೆ ಎಂಟ್ರಿ ಕೊಟ್ಟ ಭಾರತೀಯ ಸೇನೆ | Oneindia Kannada

      ಮಂಗಳವಾರ ರಾತ್ರಿ ಶ್ರೀನಿವಾಸಪುರ ತಾಲೂಕಿನ ರೋಜರನಹಳ್ಳಿ ಬಳಿ ಕಾರನ್ನು ಪರಿಶೀಲಿಸಿದ ಪೊಲೀಸರಿಗೆ ದಾಖಲೆ ಇಲ್ಲದ 2 ಕೋಟಿ 94 ಲಕ್ಷದ 50 ಸಾವಿರ ರೂ. ಹಣ ಸಿಕ್ಕಿದೆ. ಕಾರಿನಲ್ಲಿದ್ದ ಕೋಲಾರ ಮೂಲದ ಚಂದ್ರಶೇಖರ್ ಹಾಗೂ ಅಮರನಾಥ್‌ರನ್ನು ವಶಕ್ಕೆ ಪಡೆಯಲಾಗಿದೆ.

      ಆಂಧ್ರಪ್ರದೇಶ ಕಡೆಯಿಂದ ಬರುತ್ತಿದ್ದ ಕೆಎ 07, ಎಂ7123 ನೋಂದಣಿ ಸಂಖ್ಯೆಯ ಶಿಫ್ಟ್‌ ಕಾರಿನಲ್ಲಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಪಡೆದಿದ್ದ ಶ್ರೀನಿವಾಸಪುರ ಠಾಣೆ ಸಬ್ ಇನ್ಸ್‌ಪೆಕ್ಟರ್ ನಾರಾಯಣಪ್ಪ ನೇತೃತ್ವದ ತಂಡ ಕಾರನ್ನು ಹಿಂಬಾಲಿಸಿ ಹಣ ಜಪ್ತಿ ಮಾಡಿದೆ.

      2 Crore Unaccounted Money Seized In Kolar

      ಶ್ರೀನಿವಾಸಪುರ ಡಿವೈಎಸ್ಪಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಹಣ ಸಿಕ್ಕ ಬಗ್ಗೆ ತನಿಖೆ ಆರಂಭಿಸಲಾಗಿದೆ. ಬಂಧಿತರಾಗಿರುವ ಇಬ್ಬರ ವಿರೋಧಿಗಳು ಪೊಲೀಸರಿಗೆ ಫೋನ್ ಮೂಲಕ ಮಾಹಿತಿ ನೀಡಿರುವ ಸಾಧ್ಯತೆ ಇದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಕಾರಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಶ್ರೀನಿವಾಸಪುರ ಠಾಣೆಗೆ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಕೊಟ್ಟಿದ್ದಾರೆ. ಎಸ್ಪಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+