ಕೋಲಾರದಲ್ಲಿ ಮಹಿಳೆ ಅಂತ್ಯಕ್ರಿಯೆಗೆ ಹೋಗಿಬಂದ 22 ಜನರಲ್ಲಿ ಸೋಂಕು

ಕೋಲಾರ, ಜುಲೈ 28: ಕೋಲಾರದಲ್ಲಿ ಮಹಿಳೆಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 22 ಜನರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ.

Recommended Video

      ಕೆಲಸ ಕಿತ್ತುಕೊಂಡ ಕರೋನಾ | Oneindia Kannada

      ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಈಚೆಗೆ ಸಾವನ್ನಪ್ಪಿದ್ದರು. ಮಹಿಳೆಯ ಅಂತ್ಯಸಂಸ್ಕಾರವು ಇದೇ ಜು.12ನೇ ತಾರೀಖು ನಡೆದಿದ್ದು, ಅಂತ್ಯಸಂಸ್ಕಾರದಲ್ಲಿ ಸುಮಾರು 50 ಮಂದಿ ಭಾಗಿಯಾಗಿದ್ದರು. ಮಹಿಳೆಯನ್ನು ಮಣ್ಣು ಮಾಡಿದ ಬಳಿಕ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

      22 People Who Attended Funeral Tested Corona Positive In Kolar

      ಬಳಿಕ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 50 ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 22 ಜನರಲ್ಲಿ ಕೊರೊನಾ ಇರುವುದು ದೃಢವಾಗಿದೆ. ಹೀಗಾಗಿ ಜಿಲ್ಲೆಯ ದೊಡ್ಡಪೊನ್ನಾಂಡಹಳ್ಳಿ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಗ್ರಾಮದಲ್ಲಿ ರ‍್ಯಾಪಿಡ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ. ಸೋಂಕಿತರನ್ನು ಸದ್ಯಕ್ಕೆ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+