ಬಂಗಾರಪೇಟೆ ತಹಶೀಲ್ದಾರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ

ಕೋಲಾರ, ಜುಲೈ 9: ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದ ಜಮೀನಿನ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಅವರ ಹತ್ಯೆಯಾಗಿದ್ದು, ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ.

Recommended Video

      Facebook , Instagram , tinder ಸೇರಿದಂತೆ ಬಾರತೀಯ ಸೇನೆಯು 89 ಆ್ಯಪ್‌ಗಳನ್ನು ನಿಷೇಧಿಸಿದೆ.| Oneindia Kannada

      ಮೃತರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.25 ಲಕ್ಷಗಳ ಪರಿಹಾರವನ್ನು, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿಯನ್ನು ನೀಡಲು ಸಿಎಂ ಸಚಿವಾಲಯದಿಂದ ಸೂಚನೆ ಬಂದಿರುವುದಾಗಿ ಜಿಲ್ಲಾಧಿಕಾರಿ ಸತ್ಯಭಾಮಾ ಅವರು ಮಾಹಿತಿ ನೀಡಿದ್ದಾರೆ.

      ಇಂದು ಸಂಜೆಯಷ್ಟೆ ಸರ್ವೆ ಕಾರ್ಯದ ಸಲುವಾಗಿ ಕಳವಂಚಿ ಗ್ರಾಮಕ್ಕೆ ತಹಶೀಲ್ದಾರ್ ತೆರಳಿದ್ದ ಸಂದರ್ಭ ನಿವೃತ್ತ ಶಿಕ್ಷಕ ವೆಂಕಟಪತಿ ಚಾಕು ಇರಿದಿದ್ದು, ಆಸ್ಪತ್ರೆಗೆ ಸಾಗಿಸುವಾಗ ತಹಶೀಲ್ದಾರ್ ಮೃತಪಟ್ಟಿದ್ದರು.

      25 Lakhs Compensation For Bangarapete Tahsildar Family From CM Relief Fund

      ಅವರ ಮೃತದೇಹವನ್ನು ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿಟ್ಟಿದ್ದು, ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿದ್ದಾರೆ. "ಇಂತಹ ಪ್ರಕರಣವನ್ನು ನಾನು ಇದುವರೆಗೂ ನೋಡಿರಲಿಲ್ಲ. ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ. ಇಂದು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ. ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+