ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಬರುತ್ತಿದ್ದ ವಿದ್ಯಾರ್ಥಿ ಸಾವು

ಕೋಲಾರ, ಜೂನ್ 18 : ದ್ವಿತೀಯ ಪಿಯುಸಿ ಆಂಗ್ಲ ಭಾಷೆಯ ಪರೀಕ್ಷೆ ಬರೆದು ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

      Solar Eclipse June 21 2020 : Sunday darshan timing changed in Kukke Subramanya | Oneindia Kannada

      ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದ ಮಂಜುನಾಥ ರೂಡಗಿ ಮೃತಪಟ್ಟ ವಿದ್ಯಾರ್ಥಿ. ಗುರುವಾರ ಪರೀಕ್ಷೆ ಬರೆದು ಬೈಕ್‌ನಲ್ಲಿ ಮನೆಗೆ ವಾಪಸ್ ಆಗುವಾಗ ಕಾರು, ಬೈಕ್ ನಡುವೆ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

      ಎನ್‌ಎಚ್‌ 218ರ ಮಲಘಾನ ಕ್ರಾಸ್‌ ಬಳಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಸಂಗು ಜಮಖಂಡಿ, ನೀಲಪ್ಪ ಜಮಖಂಡಿ ಮತ್ತು ರಮೇಶ್ ಮೋಹಿತೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

      2nd PUC Student Killed In Road Accident

      ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಕೋಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

      ಲಾಕ್ ಡೌನ್ ಘೋಷಣೆಯಾದ ಕಾರಣ ಮಾರ್ಚ್‌ನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷೆಯ ಪರೀಕ್ಷೆ ಮುಂದೂಡಲಾಗಿತ್ತು. ಗುರುವಾರ ಕರ್ನಾಟಕದಲ್ಲಿ ಪರೀಕ್ಷೆ ನಡೆದಿತ್ತು. ಮಂಜುನಾಥ್ ಪರೀಕ್ಷೆ ಬರೆಯಲು ಹೋಗಿದ್ದ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+