• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕಿಗೆ ಕೋಲಾರದಲ್ಲಿ 3, ಕಾಫಿನಾಡಿನಲ್ಲಿ ಒಂದು ಸಾವು

By ಕೋಲಾರ ಪ್ರತಿನಿಧಿ
|

ಕೋಲಾರ, ಜುಲೈ 16: ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿ ಓರ್ವ, ಶ್ರೀನಿವಾಸಪುರ ಪಟ್ಟಣದಲ್ಲಿ ಓರ್ವ ಹಾಗೂ ಮಾಲೂರು ತಾಲೂಕಿನಲ್ಲಿ ಓರ್ವರು ಇಂದು ಮೃತಪಟ್ಟಿದ್ದಾರೆ.

   Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಇದರೊಂದಿಗೆ ಇಲ್ಲಿವರೆಗೂ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಏರುಗತಿಯಲ್ಲಿ ಸಾಗಿದೆ. ಇಂದು ಒಂದೇ ದಿನ ಮೂವರು ಸಾವನ್ನಪ್ಪಿರುವುದು ಜಿಲ್ಲಾಡಳಿತಕ್ಕೆ ಕೊಂಚ ಆತಂಕ ಮೂಡಿಸಿದೆ.

   ಕೊರೊನಾ ವೈರಸ್ ಗೆ ಉಡುಪಿಯಲ್ಲಿ ಸರಣಿ ಸಾವು: ಆತಂಕ!

   ಇಲ್ಲಿವರೆಗೂ ಸಾವನ್ನಪ್ಪಿದವರೆಲ್ಲರೂ ಕೋಲಾರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದವರು ಎನ್ನುವುದು ಗಮನಾರ್ಹ ಸಂಗತಿ. ಬುಧವಾರವಷ್ಟೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಅವರು ಖಾಸಗಿ ಆಸ್ಪತ್ರೆಯ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಇದೀಗ ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ.

   ಕಾಫಿನಾಡಲ್ಲಿ ಕೊರೊನಾಗೆ ಎಂಟನೇ ಬಲಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಕಡೂರು ತಾಲೂಕಿನ ಬೀರೂರು ಮೂಲದ ಮಹಿಳೆ ಸಾವನ್ನಪ್ಪಿದ್ದು, 3 ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದುಬಂದಿದೆ. ನಿನ್ನೆ ಮೃತ ಮಹಿಳೆಯ ಮಗಳಿಗೂ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು.

   ಜಿಲ್ಲೆಯಲ್ಲಿ 30 ಮಂದಿಯಲ್ಲಿ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರು 14, ಕಡೂರು 7, ತರೀಕೆರೆ 3, ಕೊಪ್ಪ 3, ಮೂಡಿಗೆರೆ 2, ಅಜ್ಜಂಪುರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 198ಕ್ಕೆ ಏರಿಕೆಯಾಗಿದೆ.

   English summary
   3 Deaths In Kolar And 1 Death In Chikkamagaluru Reported Due To Coronavirus Today,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X