ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ ಪಡೆದ ಲಂಚ ಎಷ್ಟು ಗೊತ್ತಾ?

By Nayana
|
Google Oneindia Kannada News

ಕೋಲಾರ, ಸೆಪ್ಟೆಂಬರ್ 5: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ಬುಧವಾರ ನಡೆದಿದೆ.

ಕೋಲಾರ ತಾಲೂಕಿನ ಹೋಳೂರು ಕಂದಾಯ ವೃತ್ತ ಗ್ರಾಮ ಲೆಕ್ಕಾಧಿಕಾರಿ ಚೇತನ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಚೇತನ್ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದ್ದಾರೆ. ಪಾವತಿವಾರು ಖಾತೆ ಬದಲಾವಣೆಗೆ 10ಸಾವಿರ ರೂ. ಹಣ ಬೇಡಿಕೆ ಇಟ್ಟು 8 ಸಾವಿರ ಹಣ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಎಸಿಬಿಗೆ ಸಿಕ್ಕಿ ಬಿದ್ದ 7 ಅಧಿಕಾರಿಗಳುಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಎಸಿಬಿಗೆ ಸಿಕ್ಕಿ ಬಿದ್ದ 7 ಅಧಿಕಾರಿಗಳು

ಹೋಳೂರಿನ ಶ್ರೀನಿವಾಸರೆಡ್ಡಿ ನೀಡಿದ್ದ ದೂರಿನ ಮೇರೆಗೆ ಎಸಿಬಿ ದಾಳಿ ನಡೆಸಿದ್ದಾರೆ, ಎಸಿಬಿ ಇನ್‌ಸ್ಪೆಕ್ಟರ್ ಶ್ರೀರಂಗಶಾಮಯ್ಯ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಚೇತನ್‌ನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಎಸಿಬಿ ದಾಳಿ : ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಬಂಧನಎಸಿಬಿ ದಾಳಿ : ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಬಂಧನ

ACB traps village accountant in Kolar

ಗ್ರಾಮ ಲೆಕ್ಕಾಧಿಕಾರಿ ಬಳಿ ಏನೇ ಕೆಲಸವಾಗಬೇಕಿದ್ದರೂ ಲಂಚವನ್ನು ನೀಡಲೇ ಬೇಕಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಇದೇ ರೀತಿ ಎಷ್ಟೆಷ್ಟು ಮಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತನಿಖೆ ವೇಳೆ ತಿಳಿಯಬೇಕಿದೆ.

English summary
A village accountant has been trapped by Anti Corruption Bureau in Kolar while receiving Rs8,000 bribe for change of khata.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X