ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭ್ರಷ್ಟಾಚಾರ ಆರೋಪ: ಅಬಕಾರಿ ಸಚಿವ ಎಚ್.ನಾಗೇಶ್ ವಿರುದ್ಧ ಪ್ರಧಾನಿಗೆ ದೂರು

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಡಿಸೆಂಬರ್ 21: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಬಕಾರಿ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಚ್.ನಾಗೇಶ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.

ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರುಪಾಯಿ ಲಂಚಕ್ಕೆ ಒತ್ತಾಯಿಸಿರುವ ಬಗ್ಗೆ ಸಚಿವ ಎಚ್.ನಾಗೇಶ ಅವರ ವಿರುದ್ಧ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಈ ಕುರಿಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಅಧಿಕೃತವಾಗಿ ದಾಖಲಾಗಿದ್ದರೂ ಪರಿಹಾರ ಸಿಕ್ಕಿರುವ ಬಗ್ಗೆ ಮಾಹಿತಿಯಿಲ್ಲ.

ಪಂಚಾಯಿತಿ ಚುನಾವಣೆ; ಪ್ರಭಾವ ತೋರಿಸಿದ ವರ್ತೂರು ಪ್ರಕಾಶ್ಪಂಚಾಯಿತಿ ಚುನಾವಣೆ; ಪ್ರಭಾವ ತೋರಿಸಿದ ವರ್ತೂರು ಪ್ರಕಾಶ್

ಇದೇ ಜುಲೈ ತಿಂಗಳ ಅವಧಿಯಲ್ಲಿ ಅಬಕಾರಿ ಇಲಾಖೆಯ ಹೊಸಪೇಟೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರು ಬೆಂಗಳೂರಲ್ಲಿ ಖಾಲಿಯಿದ್ದ ಜಂಟಿ ಆಯುಕ್ತರ ಹುದ್ದೆಗೆ ಬರಲು ಬಯಸಿದ್ದರು. ನಿವೃತ್ತಿಯ ಅಂಚಿನಲ್ಲಿದ್ದ ಈ ಅಧಿಕಾರಿಯು ಆರೋಗ್ಯದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಈ ಬಗ್ಗೆ ಮನವಿ ಮಾಡಿದಾಗ ಅಬಕಾರಿ ಸಚಿವ ಎಚ್.ನಾಗೇಶ ಅವರು ಒಂದು ಕೋಟಿ ರುಪಾಯಿ ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದರು ಎನ್ನಲಾಗುತ್ತಿದೆ.

Allegations Of Corruption: Complains Against Excise Minister H.Nagesh To Prime Minister

ಲಂಚ ಕೊಡುವುದಕ್ಕೆ ಅಧಿಕಾರಿಯು ನಿರಾಕರಿಸಿದ್ದಕ್ಕಾಗಿ ರಜೆ ಮೇಲೆ ತೆರಳಲು ಸಚಿವ ಎಚ್.ನಾಗೇಶ ಅವರು ಬಲವಂತ ಮಾಡಿದರು. ಅದಕ್ಕೆ ಒಪ್ಪದ ಕಾರಣ ಮಾನಸಿಕ ಹಿಂಸೆ ಕೊಡಲಾಗುತ್ತಿದೆ ಅಂತ ಅಧಿಕಾರಿಯ ಪುತ್ರಿಯೂ ಆಗಿರುವ ಬೆಂಗಳೂರು ವಾಸಿ ಸ್ನೇಹಾ ಎಂಬುವರು ದೂರಲ್ಲಿ ವಿವರಿಸಿದ್ದಾರೆ.

ಸಚಿವ ಎಚ್.ನಾಗೇಶ ವಿರುದ್ಧ ಡಿಸಿಎಂ ಅಶ್ವತ್ಥನಾರಾಯಣ್ ಅವರಿಗೆ ಮಾಹಿತಿಯನ್ನು ನೀಡಿದರೂ ಪ್ರಯೋಜನವಾಗಲಿಲ್ಲ. ಕಳೆದ ಒಂದು ತಿಂಗಳಿನಿಂದಲೂ ಅಬಕಾರಿ ಇಲಾಖೆಯಲ್ಲಿ ಆರು ನೂರಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ ಆಗಿದೆ ಎನ್ನಲಾಗಿದೆ.

ಕೋಲಾರದ ಮೂಲದ ಇಬ್ಬರು ದಲ್ಲಾಳಿಗಳನ್ನು ಇರಿಸಿಕೊಂಡು ಸಚಿವರು ಅಕ್ರಮ ಹಣವನ್ನು ಪಡೆದುಕೊಳ್ಳಲಾಗುತ್ತಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ತಮ್ಮ ಆದರ್ಶಗಳನ್ನು ಪಾಲಿಸುತ್ತಿರುವ ನಾನು, ಇದೀಗ ತಮ್ಮ ಮೇಲೆ ಕೊನೆಯ ಭರವಸೆಯನ್ನು ಇರಿಸಿಕೊಂಡು ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದು ಅಧಿಕಾರಿಯ ಪುತ್ರಿ ಸ್ನೇಹ ಎಂಬುವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಕಚೇರಿಗೆ ದೂರನ್ನು ಬರೆದಿರುವ ಸ್ನೇಹ ಅವರು, ರಾಜ್ಯದ ಸಚಿವರುಗಳಿಗೆ, ವಿರೋಧ ಪಕ್ಷದ ಮುಖಂಡರಿಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಹ ಪತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸ್ನೇಹ ಅವರು ಸಲ್ಲಿಸಿರುವ ದೂರಿನಲ್ಲಿ ಬೆಂಗಳೂರಿನ ವಾಸಸ್ಥಳದ ವಿಳಾಸವಿದ್ದು, ಮೊಬೈಲ್ ನಂಬರ್ +919538260545 ಆಗಿದೆ. ದೂರಿನ ಬಗ್ಗೆ ಮುಂದಿನ ಕ್ರಮ ಏನಾಗಿದೆ ಎಂಬುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿಯಿಲ್ಲ. ಪ್ರಧಾನಿ ಕಚೇರಿಯಲ್ಲಿ ಅಧಿಕೃತ ದೂರಿನ ಸಂಖ್ಯೆ PMOPG/E/2020/0655623, ಇ - ಸ್ಪಂದನ ಮನವಿಯ ಸಂಖ್ಯೆ 51868298.

English summary
A complaint has been lodged to the Prime Minister's Office on corruption charges against Kolar District In charge minister and Excise Minister H.Nagesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X