• search
  • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುನಿರತ್ನಗೆ ಕೈ ತಪ್ಪಿದ ಸಚಿವ ಸ್ಥಾನ; ಶ್ರೀರಾಮುಲು ಹೇಳಿದ್ದೇನು?

By ಕೋಲಾರ ಪ್ರತಿನಿಧಿ
|

ಕೋಲಾರ, ಜನವರಿ 13: "ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ವಲಸೆ ಹಾಗೂ ಮೂಲ ಬಿಜೆಪಿಯ ಹಿರಿಯ ಶಾಸಕರಿಗೆ ಅವಕಾಶ ನೀಡಲಾಗುತ್ತಿದೆ. ಮುನಿರತ್ನ ಮಂತ್ರಿಯಾಗುವ ಹಾಗೂ ಕೈ ಬಿಡುವ ಬಗ್ಗೆ ತಿಳಿದಿಲ್ಲ" ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಬುಧವಾರ ಕೋಲಾರದ ಬಂಗಾರಪೇಟೆಯಲ್ಲಿ ಮಾತನಾಡಿದ ಸಚಿವರು, "ಹಿರಿಯ ಶಾಸಕರು ಮಂತ್ರಿಯಾಗಬೇಕೆಂದು ಆಸೆ ಪಟ್ಟಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ರಾಜ್ಯಾಧ್ಯಕ್ಷರು ತೀರ್ಮಾನ ಕೈಗೊಳ್ಳಬೇಕಿದೆ. ಮುನಿರತ್ನ ಅವರನ್ನು ಸೇರಿಸಿಕೊಳ್ಳುವ, ಕೈ ಬಿಡುವ ಬಗ್ಗೆ ತಿಳಿದಿಲ್ಲ" ಎಂದರು.

8 ಬಾರಿ ಗೆದ್ದಿರುವ ಶಾಸಕ ಉಮೇಶ್ ಕತ್ತಿ ಪರಿಚಯ

"ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಂ. ಪಿ. ರೇಣುಕಾಚಾರ್ಯ ಅವರ ಹೇಳಿಕೆಗಳು ವೈಯಕ್ತಿಕವಾದದ್ದು. ಅವರಿಬ್ಬರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಹೆಚ್. ನಾಗೇಶ್ ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ನನಗೆ ಮಾಹಿತಿ ತಿಳಿದಿಲ್ಲ" ಎಂದು ಸ್ಪಷ್ಟಪಡಿಸಿದರು.

ಸಂಪುಟ ವಿಸ್ತರಣೆ ವೇಳೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು: ಈಶ್ವರಪ್ಪ

"ಜಿ. ಎಚ್. ತಿಪ್ಪಾರೆಡ್ಡಿ ಅವರ ಹೇಳಿಕೆಗಳು ಸಹ ವೈಯಕ್ತಿಕ. ವೈಯಕ್ತಿಕವಾಗಿ ಎಲ್ಲರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಯಾರ ವಿರುದ್ದ ಹೇಳಿಕೆ ಕೊಟ್ಟರು ಅದು ವೈಯಕ್ತಿಕ. ಎಲ್ಲರನ್ನೂ ಸಮಾಧಾನಪಡಿಸುವ ಕೆಲಸ ಹಿರಿಯ ನಾಯಕರು ಮಾಡುತ್ತಾರೆ" ಎಂದು ಶ್ರೀರಾಮುಲು ಹೇಳಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ ಗಂಡಾಂತರ?

ಸಚಿವರ ಪಟ್ಟಿ: ಸಚಿವ ಸಂಪುಟ ಸೇರುವವರ ಹೆಸರುಗಳನ್ನು ಅಧಿಕೃತವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಓದಿ ಹೇಳಿದ್ದಾರೆ. ಉಮೇಶ್ ಕತ್ತಿ, ಅರವಿಂದ್ ಲಿಂಬಾವಲಿ, ಎಸ್. ಅಂಗಾರ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ. ಪಿ. ಯೋಗೇಶ್ವರ, ಮುರುಗೇಶ್ ನಿರಾಣಿ ಅವರು ಸಂಪುಟ ಸೇರುತ್ತಿದ್ದಾರೆ.

ಯಡಿಯೂರಪ್ಪ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಶ್ ರಾಜೀನಾಮೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮುಖ್ಯಮಂತ್ರಿಗಳ ಸೂಚನೆಯಂತೆ ರಾಜೀನಾಮೆ ನೀಡಿದ್ದಾರೆ.

English summary
Karnataka social welfare minister B Sriramulu on chief minister B. S. Yediyurappa cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X