ಬಂಗಾರಪೇಟೆ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು
ಬಂಗಾರಪೇಟೆ, ಸೆಪ್ಟೆಂಬರ್ 27: ಟಾಟಾ ಸುಮೊ ಹಾಗೂ ಇಂಡಿಕಾ ಕಾರಿನ ನಡುವೆ ಸಂಭವಿಸಿದ ಭೀಕರ ಡಿಕ್ಕಿ ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಈ ರಸ್ತೆಯಲ್ಲಿ ಜನ ಸಂಚಾರ ಕಡಿಮೆ ಇರುವುದರಿಂದ ಭೀಕರ ಅಪಘಾತವಾಗಿ ಅರ್ಧ ಗಂಟೆಯಾದರೂ ನೆರವಿಗೆ ಯಾರೂ ಬಂದಿರಲಿಲ್ಲ ಎಂದು ತಿಳಿದು ಬಂದಿದೆ.
ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಪೈಕಿ ಒಬ್ಬರು ಭಾರತೀಯ ಸೇನೆ ಯೋಧ ಎಂದು ಗೊತ್ತಾಗಿದೆ.

ಮೃತರನ್ನು ಭರತ್ ಕುಮಾರ್, ಬಾಬು, ರಿಗೋ ಹಾಗೂ ರಮೇಶ್ ಬಾಬು ಎಂದು ಗುರುತಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತರೆಲ್ಲರೂ ಕೆಜಿಎಫ್ ನ ಚಾಂಪಿಯನ್ ರೀಪ್ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಬಂಗಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.












Click it and Unblock the Notifications