ಕೊಡಗು ಪರಿಹಾರ: ಕೇಂದ್ರದ ವಿರುದ್ಧ ಕೃಷ್ಣ ಬೈರೇಗೌಡ ಆಕ್ರೋಶ
ಕೋಲಾರ, ಆಗಸ್ಟ್ 25: ಕೇರಳ, ಕೊಡಗು ಎರಡೂ ಕಡೆಯು ಪ್ರವಾಹ ಬಂದಿದೆ ಆದರೆ ಕೇಂದ್ರ ಸರ್ಕಾರ ಕೇರಳಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿದ್ದು ಕರ್ನಾಟಕಕ್ಕೆ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತಣಾಡಿದ ಅವರು, ಕೇಂದ್ರ ಸರ್ಕಾರವು ನೆರೆ ಸಂತ್ರಸ್ತರಿಗೆ ಇದುವರೆಗೂ ನಯಾಪೈಸೆ ಪರಿಹಾರ ದೊರೆತಿಲ್ಲ, ರಾಜ್ಯ ಸರ್ಕಾರ ಈಗಾಗಲೇ ಪರಿಹಾರಕ್ಕಾಗಿ ಎರಡು ಸಾವಿರ ಕೋಟಿ ಮನವಿ ಮಾಡಿದೆ, ಕೇಂದ್ರ ಸರ್ಕಾರದಿಂದ ಇದಕ್ಕೆ ಪೂರಕ ಸ್ಪಂದನೆ ದೊರೆತಿಲ್ಲ ಎಂದರು.
ಕೊಡಗಿನಲ್ಲಿ ಬಹುಭಾಗ ನಾಶವಾಗಿದೆ, ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ, ಹೀಗಿರುವಾಗ ಅವರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.

ರಾಜ್ಯ ಸರ್ಕಾರವೇ ಅಗತ್ಯ ಕಾರ್ಯಗಳಿಗೆ ಈಗಾಗಲೇ ಚಾಲನೆ ನೀಡಿದೆ, ಇನ್ನಾದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಬದಲಾಯಿಸಬೇಕು, ಮತ್ತೆ ಸಿಎಂ ಆಗುವ ಸಿದ್ದರಾಮಯ್ಯ ಅವರ ಕನಸು ವಿಚಾರ ಹಾಗೂ ನಿರ್ಮಲಾ ಸೀತಾರಾಮನ್ ನಡವಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲವೆಂದು ಹೇಳಿ ತೆರಳಿದರು.












Click it and Unblock the Notifications