ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ಒಳ್ಳೆಯದು: ಶಾಸಕ ಸುಧಾಕರ್

ಕೋಲಾರ, ಮೇ 6: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿ ಆದರೆ ಒಳಿತು ಎನ್ನುವ ಮೂಲಕ ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ಹೇಳಿದ್ದಾರೆ. ಇದರಿಂದ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ ನಾಯಕತ್ವದ ಕುರಿತು ಶಾಸಕರಲ್ಲಿ ಇರುವ ಅಸಮಾಧಾನ ಪುನಃ ಪ್ರಕಟಗೊಂಡಿದೆ.

ಮೇ 23ರ ಫಲಿತಾಂಶದ ಬಳಿಕ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ. ಆದರೆ, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಸರ್ಕಾರವಿದ್ದರೆ ಒಳ್ಳೆಯದು. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಒಳಿತು ಎಂದು ಕೆ. ಸುಧಾಕರ್ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಂತೆ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿಯೇ ನಾವೆಲ್ಲ ಹೋಗುತ್ತಿದ್ದೇವೆ. ಹೈಕಮಾಂಡ್ ಸಿಎಂ ಬದಲಾಯಿಸಿದರೆ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದಿದ್ದಾರೆ.

Chikkaballapur Congress MLA K Sudhakar said better if Siddaramaiah become CM again

ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಲ್ಲಿ ಅತೃಪ್ತಿ ಇರುವುದು ನಿಜ. ರಾಜ್ಯದ ಕೆಲವೆಡೆ ಮೈತ್ರಿಧರ್ಮ ಪಾಲನೆಯಾಗಿಲ್ಲ. ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಮತಗಳು ಬಿಜೆಪಿ ಪಾಲಾಗಿವೆ ಎಂದು ಸುಧಾಕರ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+