ಯಡಿಯೂರಪ್ಪಗೆ ಎರಡು ನಾಲಿಗೆ: ಸಿದ್ದರಾಮಯ್ಯ

ಕೋಲಾರ, ಡಿಸೆಂಬರ್ 30: ಕೋಲಾರ ಜಿಲ್ಲೆಯಲ್ಲಿ ನವ ಕರ್ನಾಟಕ ನಿರ್ಮಾಣ ಯಾತ್ರೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಜಿಲ್ಲೆಯ ಶ್ರೀನಿವಾಸಪುರದಲ್ಲಿ ಶನಿವಾರ ಸಾಧನಾ ಸಮಾವೇಶದಲ್ಲಿ ಮಾತನಾಡಿ, ಯಡಿಯೂರಪ್ಪ ಅವರದು ಎರಡು ನಾಲಿಗೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷಿ ಸಾಲ ಮನ್ನಾ ಮಾಡದ ಅವರು ಈಗ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

CM Siddaramaiah inaugurates various development projects in Kolar
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮೇಲೆ ಹರಿಹಾಯ್ದ ಅವರು 'ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದ ಎರಡು ತಿಂಗಳಲ್ಲೇ ಪೊಲೀಸ್‌ ಗೋಲಿಬಾರ್‌ ಮಾಡಿಸಿ ಇಬ್ಬರು ರೈತರನ್ನು ಕೊಲ್ಲಿಸಿದರು' ಎಂದರು.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆ ಸ್ಥಗಿತಗೊಳಿಸುವುದಾಗಿ ಹೇಳಿರುವ ಎಚ್‌.ಡಿ. ಕುಮಾರಸ್ವಾಮಿ ಬಯಲುಸೀಮೆ ಭಾಗದ ಜನರ ವಿರೋಧಿ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀರು ಕೊಡುವ ಪ್ರಯತ್ನ ಮಾಡಲಿಲ್ಲ. ಅವರದು ಜನಪರ ರಾಜಕಾರಣವಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+