ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಪ್ರಚಾರಾಂದೋಲನ ಆರಂಭ

|
Google Oneindia Kannada News

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 19 : ಕರ್ನಾಟಕ ಪ್ರದೇಶ ಕಾ೦ಗ್ರೆಸ್ ಸಮಿತಿ ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ನಡೆಸಲು ಮುಂದಾಗಿದೆ. ಅಕ್ಟೋಬರ್‌ ತಿಂಗಳಿನಲ್ಲಿ ಗೌರಿಬಿದನೂರಿನ ವಿದುರಾಶ್ವಥದಿಂದ ಪ್ರಚಾರಾಂದೋಲನ ಆರಂಭವಾಗಲಿದೆ.

ಸೋಮವಾರ ವಿದುರಾಶ್ವಥದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಕುರಿತು ಮಾಹಿತಿ ನೀಡಿದರು. 'ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಈ ಪ್ರಚಾರಾಂದೋಲನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ'.[ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು]

Congress plans campaign about govt popular schemes

ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಂದು ಈ ಪ್ರಚಾರಾಂದೋಲನಕ್ಕೆ ಚಾಲನೆ ನೀಡಲಾಗುತ್ತದೆ. ಒಂದು ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತದೆ. ಈ ಆಂದೋಲನದ ಭಾಗವಾಗಿ ಪ್ರತಿ ಕ್ಷೇತ್ರದಲ್ಲಿಯೂ ಪಾದಯಾತ್ರೆ, ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುತ್ತದೆ.[ಸಿದ್ದರಾಮಯ್ಯ ಸರ್ಕಾರವನ್ನು ಕಾಡಿದ 10 ವಿವಾದಗಳು]

'ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರು, ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ದೇಶದಲ್ಲಿ ಅಸಹಿಷ್ಣುತೆ ವಾತಾವರಣ ಇದೆ. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.

English summary
Karnataka Pradesh Congress Committee (KPCC)working president Dinesh Gundu Rao said, party is planning to launch its campaign in all constituencies to educate people about CM Siddaramaiah lead Congress govt popular schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X