• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲಾರ; ಕೋವಿಡ್ ಚಿಕಿತ್ಸೆ ಬಗ್ಗೆ ದೂರು ನೀಡಿದ್ದಕ್ಕೆ ಯೋಧನಿಗೆ ಥಳಿತ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಏಪ್ರಿಲ್ 27; ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಯೋಧನ ಮೇಲೆ ಹಲ್ಲೆ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮಂಗಳವಾರ ಕೋಲಾರದ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಯೋಧ ಶ್ರೀನಿವಾಸ್ ಮೇಲೆ ಸ್ವ್ಯಾಬ್ ಕಲೆಕ್ಟರ್ ಚಿನ್ನಿ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ. ಶ್ರೀನಿವಾಸ್ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣಗೂ ದೂರು ನೀಡಿದ್ದರು.

ತಮಿಳುನಾಡಿನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಯೋಧ ಶ್ರೀನಿವಾಸ್ ತಾಯಿಗೆ ಕೋವಿಡ್ ಸೋಂಕು ತಗುಲಿತ್ತು. ತಾಯಿಯನ್ನು ನೋಡಲು ಪಿಪಿಇ ಕಿಟ್ ಧರಿಸಿ ಸೋಂಕಿತರು ಇರುವ ವಾರ್ಡ್‌ಗೆ ಶ್ರೀನಿವಾಸ್ ಹೋಗಿದ್ದರು.

ಕೋಲಾರ; ವೆಂಟಿಲೇಟರ್ ಸಮಸ್ಯೆ 4 ರೋಗಿಗಳು ಸಾವು ಕೋಲಾರ; ವೆಂಟಿಲೇಟರ್ ಸಮಸ್ಯೆ 4 ರೋಗಿಗಳು ಸಾವು

ಯೋಧನ ತಾಯಿ ಹಾಸಿಗೆಯಿಂದ ಕೆಳಗೆ ಬಿದ್ದು ಗಾಯವಾಗಿದ್ದರೂ ಸರಿಯಾಗಿ ಚಿಕಿತ್ಸೆ ನೀಡಿರಲಿಲ್ಲ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಜೊತೆ ಶ್ರೀನಿವಾಸ್ ಮಾತಿನ ಚಕಮಕಿ ನಡೆಸಿದ್ದರು. ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿತ್ತು.

ಕೋಲಾರ; ತಾಲೂಕಿಗೆ 2 ಕೋವಿಡ್ ಕೇರ್ ಸೆಂಟರ್ ಆರಂಭ ಕೋಲಾರ; ತಾಲೂಕಿಗೆ 2 ಕೋವಿಡ್ ಕೇರ್ ಸೆಂಟರ್ ಆರಂಭ

ಮಧ್ಯಾಹ್ನ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿದ್ದರು. ಆಗ ಈ ಕುರಿತು ಯೋಧ ಶ್ರೀನಿವಾಸ್ ದೂರು ನೀಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬ್ಬಂದಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಯೋಧನ ಮೇಲೆ ಆಸ್ಪತ್ರೆ ಆವರಣದಲ್ಲಿಯೇ ಹಲ್ಲೆ ಮಾಡಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಆಸ್ಪತ್ರೆ ವೈದ್ಯಧಿಕಾರಿ ಶ್ರೀನಿವಾಸ್ ಕುಮ್ಮಕ್ಕಿನಿಂದಲೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

   ಐಪಿಎಲ್‌ ಪಂದ್ಯಾವಳಿಗಳನ್ನು ಬ್ಯಾನ್‌ ಮಾಡುವಂತೆ ಆಗ್ರಹಿಸಿದ ಕಾಂಗ್ರೆಸ್‌ ಎಂಎಲ್‌ಸಿ ಪ್ರಕಾಶ್ ರಾಥೋಡ್ | Oneindia Kannada

   ಯೋಧನ ಮೇಲೆ ಹಲ್ಲೆ ನಡೆಯುವಾಗ ಪೊಲೀಸರು ಸಹ ಅಲ್ಲೇ ಇದ್ದರು. ಯೋಧ ಮತ್ತು ಆಸ್ಪತ್ರೆ ಸಿಬ್ಬಂದಿಯನ್ನು ಶ್ರೀನಿವಾಸಪುರ ಠಾಣೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

   English summary
   Attack on soldier in Kolar district Srinivaspur taluk hospital for asking about his mother treatment who COVID patient.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X