• search
  • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ; ಗ್ರಾಮ ವಾಸ್ತವ್ಯದಲ್ಲಿ ಬಂಗಾರಪೇಟೆ ತಹಶೀಲ್ದಾರ್ ಡ್ಯಾನ್ಸ್!

By ಕೋಲಾರ ಪ್ರತಿನಿಧಿ
|

ಕೋಲಾರ, ಫೆಬ್ರವರಿ 21; ಕಂದಾಯ ಸಚಿವ ಆರ್. ಅಶೋಕ ಸೂಚನೆಯಂತೆ ಶನಿವಾರ 'ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ' ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮ ನಡೆಯಿತು. ಅಧಿಕಾರಿಗಳು ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿದರು.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ದಯಾನಂದ ಹಾಗೂ ಸಿಬ್ಬಂದಿಗಳು ಗ್ರಾಮ ವಾಸ್ತವ್ಯದ ವೇಳೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳಾ ಸಿಬ್ಬಂದಿಗಳು ಹಾಗೂ ಗ್ರಾಮ ಲೆಕ್ಕಿಗರೂ ಸಹ ನೃತ್ಯ ಮಾಡಿದ್ದಾರೆ.

ಕೋಲಾರ; ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೋಲಾರ; ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬಂಗಾರಪೇಟೆ ತಾಲೂಕಿನ ನರಿನತ್ತ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯದಲ್ಲಿ ಅಧಿಕಾರಿಗಳು ನೃತ್ಯ ಮಾಡಿದ್ದಾರೆ. ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ಅಧಿಕಾರಿಗಳು ಸಮಯವನ್ನು ವ್ಯರ್ಥ ಮಾಡಿದ್ದಾರೆ ಎಂದು ಗ್ರಾಮದ ಜನರು ಆರೋಪಿಸಿದ್ದಾರೆ.

ಕೋಲಾರ; ಮಹಿಳೆ ಸಾವು, ವೈದ್ಯರ ವಿರುದ್ಧ ಕುಟುಂಬಸ್ಥರ ಪ್ರತಿಭಟನೆಕೋಲಾರ; ಮಹಿಳೆ ಸಾವು, ವೈದ್ಯರ ವಿರುದ್ಧ ಕುಟುಂಬಸ್ಥರ ಪ್ರತಿಭಟನೆ

ಆರ್. ಅಶೋಕ ವಾಸ್ತವ್ಯ; ಕಂದಾಯ ಸಚಿವರು ಸೂಚನೆಯನ್ನು ಮಾತ್ರ ನೀಡಲಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಅಶೋಕ ಅವರು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದರು.

ವಿಶೇಷ ಸುದ್ದಿ: ಎರಡು ಗ್ರಾ.ಪಂ ನಡುವೆ ಅಡ್ಡ ಕತ್ತರಿಯಲ್ಲಿ ಸಿಲುಕಿದ ಚಿತ್ರದುರ್ಗದ ನತದೃಷ್ಟ ಗ್ರಾಮ!ವಿಶೇಷ ಸುದ್ದಿ: ಎರಡು ಗ್ರಾ.ಪಂ ನಡುವೆ ಅಡ್ಡ ಕತ್ತರಿಯಲ್ಲಿ ಸಿಲುಕಿದ ಚಿತ್ರದುರ್ಗದ ನತದೃಷ್ಟ ಗ್ರಾಮ!

ರಾಜ್ಯಮಟ್ಟದಲ್ಲಿ ಶನಿವಾರ 'ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ' ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಗ್ರಾಮ ವಾಸ್ತವ್ಯದ ವೇಳೆ ಅಧಿಕಾರಿಗಳು ಈ ರೀತಿ ನೃತ್ಯ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ವಿಡಿಯೋ

English summary
Viral video Kolar district Bangarpet tahsildar Dayananda dance during grama vastavya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X