ಕೋಲಾರದಲ್ಲಿ 500ರ ಸಮೀಪದಲ್ಲಿ ಕೊರೊನಾ ಸೋಂಕು; ಡಿಸಿ ಕಿವಿಮಾತು
ಕೋಲಾರ, ಜುಲೈ 18: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತವು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಇವುಗಳನ್ನು ಪಾಲನೆ ಮಾಡುವ ಮೂಲಕ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಮನವಿ ಮಾಡಿದರು.
Recommended Video
ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಯಾರೂ ಆತಂಕ ಪಡಬೇಡಿ" ಎಂದು ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 474 ಕೊರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿದೆ. 156 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 42 ಜನರನ್ನು ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ 309 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 9 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಸೋಂಕಿತರ ಪ್ರಾಥಮಿಕ ಸಂಪರ್ಕಗಳು 28 ದಿನವಾದರೂ ನೆಗೆಟಿವ್ ಬರುತ್ತಿತ್ತು. ಆದರೆ ಇತ್ತೀಚೆಗೆ ಸೋಂಕಿತರ ಶೇ29ರಷ್ಟು ಪ್ರಾಥಮಿಕ ಸಂಪರ್ಕಗಳು ಪಾಸಿಟಿವ್ ಬರುತ್ತಿವೆ. ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ಹೆಚ್ಚಿನ ಟೆಸ್ಟ್‌ಗಳನ್ನು ಮಾಡಲಾಗುತ್ತಿದೆ. ಪ್ರತಿ ತಾಲೂಕಿಗೆ ಒಂದು ಕ್ರೂನಟ್ ಮಷಿನ್ ಖರೀದಿಸಲು ಅನುಮತಿ ನೀಡಿದ್ದು, ಇದರಿಂದ ಇನ್ನೂ ಹೆಚ್ಚಿನ ಟೆಸ್ಟ್ ಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.












Click it and Unblock the Notifications