• search
 • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲಾರದಲ್ಲಿ 500ರ ಸಮೀಪದಲ್ಲಿ ಕೊರೊನಾ ಸೋಂಕು; ಡಿಸಿ ಕಿವಿಮಾತು

By ಕೋಲಾರ ಪ್ರತಿನಿಧಿ
|

ಕೋಲಾರ, ಜುಲೈ 18: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತವು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಇವುಗಳನ್ನು ಪಾಲನೆ ಮಾಡುವ ಮೂಲಕ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಮನವಿ ಮಾಡಿದರು.

   Congress counsellor ಪ್ರಕಾರ Rum ಕೊರೊನಗೆ ಮುದ್ದು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಯಾರೂ ಆತಂಕ ಪಡಬೇಡಿ" ಎಂದು ಕಿವಿಮಾತು ಹೇಳಿದರು.

   ಕೊರೊನಾ ಸೋಂಕಿಗೆ ಕೋಲಾರದಲ್ಲಿ 3, ಕಾಫಿನಾಡಿನಲ್ಲಿ ಒಂದು ಸಾವು

   ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 474 ಕೊರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿದೆ. 156 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 42 ಜನರನ್ನು ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ 309 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 9 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

   ಈ ಹಿಂದೆ ಸೋಂಕಿತರ ಪ್ರಾಥಮಿಕ ಸಂಪರ್ಕಗಳು 28 ದಿನವಾದರೂ ನೆಗೆಟಿವ್ ಬರುತ್ತಿತ್ತು. ಆದರೆ ಇತ್ತೀಚೆಗೆ ಸೋಂಕಿತರ ಶೇ29ರಷ್ಟು ಪ್ರಾಥಮಿಕ ಸಂಪರ್ಕಗಳು ಪಾಸಿಟಿವ್ ಬರುತ್ತಿವೆ. ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ಹೆಚ್ಚಿನ ಟೆಸ್ಟ್‌ಗಳನ್ನು ಮಾಡಲಾಗುತ್ತಿದೆ. ಪ್ರತಿ ತಾಲೂಕಿಗೆ ಒಂದು ಕ್ರೂನಟ್ ಮಷಿನ್ ಖರೀದಿಸಲು ಅನುಮತಿ ನೀಡಿದ್ದು, ಇದರಿಂದ ಇನ್ನೂ ಹೆಚ್ಚಿನ ಟೆಸ್ಟ್ ಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

   English summary
   Kolar dc sathyabhama requested public to cooperate with following rules to avoid coronavirus in district,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X