ಕೋಲಾರದಲ್ಲಿ ಭ್ರಷ್ಟರ ಮನೆ ಬಾಗಿಲು ತಟ್ಟಿದ ಇಡಿ ಅಧಿಕಾರಿಗಳು!
ಮಾಲೂರು ಜನವರಿ 8: ಕೋಲಾರ ಜಿಲ್ಲೆಯ ಮಾಲೂರಿನಲ್ಲಿಂದು ಇಡಿ ಅಧಿಕಾರಿಗಳು ಭ್ರಷ್ಟರ ಮನೆ ಬಾಗಿಲು ತಟ್ಟಿದ್ದಾರೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ ಮಾಡಿದೆ.
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಕೊಮ್ಮನಹಳ್ಳಿಯಲ್ಲಿರುವ ನಂಜೇಗೌಡ ಮನೆಯಲ್ಲಿ ಶೋಧಕಾರ್ಯ ನಡೆದಿದೆ. ಕೋಲಾರ ತಾಲ್ಲೂಕು ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್‌ನಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಆರೋಪ ಕೇಳಿಬಂದಿತ್ತು. ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್‌ನಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ನೇಮಕಾತಿ ವಿಚಾರದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪದ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.












Click it and Unblock the Notifications