ಟಿಕೆಟ್ ರಾಜಕೀಯ: ಕೆಪಿಸಿಸಿ ಉಪಾಧ್ಯಕ್ಷ ವಿಆರ್ ಸುದರ್ಶನ್ ರಾಜೀನಾಮೆ?

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 15: ಕಾಂಗ್ರೆಸ್ಸಿನ ಹಿರಿಯ ನಾಯಕ ವಿ. ಅರ್ ಸುದರ್ಶನ್ ಅವರು ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಅವರು ಟಿಕೆಟ್ ಕೈ ತಪ್ಪುವ ಶಂಕೆಯಿಂದ ತಮ್ಮ ರಾಜೀನಾಮೆಯನ್ನು ವಾಟ್ಸಪ್ ಮೂಲಕ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Elections 2018 Ticket politics: KPCC Vice President V. R Sudarshan resigns

ಕೋಲಾರದಿಂದ ನಿವೃತ್ತ ಐಎಎಸ್ ಅಧಿಕಾರಿ ಜಮೀರ್ ಪಾಶ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರುವ ಮಾಹಿತಿ ತಿಳಿದ ತಕ್ಷಣ, ಬೇಸರಗೊಂಡು ಸುದರ್ಶನ್ ಅವರು ಈ ರೀತಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಸುದರ್ಶನ್ ವಿರುದ್ಧ ಭೂ ಒತ್ತುವರಿ ದೂರು

ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ, ಬಂಡಾಯ ತಲೆ ದೋರಿದೆ. ದೆಹಲಿಯಲ್ಲಿ ಹಾಗೂ ಹೀಗೂ 150ಕ್ಕೂ ಅಧಿಕ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಫೈನಲ್ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರು ಬೆಂಗಳೂರಿಗೆ ಬಂದಿದ್ದಾರೆ.

ಭಾನುವಾರ ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Elections 2018 : Senior Congress leader V.R. Sudarshan on Saturday resigned from the KPCC vice-president’s post following reported denial of ticket to him to contest from Kolar. Congress is due to release its first list of candidates on April 15 afternoon.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ