ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಲೂರಿನಲ್ಲಿ ಕಾಡಾನೆ ದಾಳಿಗೆ ಬೆಳೆ ನಾಶ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಟಗುತ್ಲ ಹಳ್ಳಿಯಲ್ಲಿ ಕಾಡಾನೆ ದಾಳಿ. ಜೋಳ, ಕೋಸು ಬೆಳೆ ನಾಶ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅರಣ್ಯದಿಂದ ಬಂದಿರುವ ಆನೆಗಳು. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ.

|
Google Oneindia Kannada News

ಕೋಲಾರ, ಜೂನ್ 17: ಜಿಲ್ಲೆಯ ಕೋಟಗುತ್ಲ ಹಳ್ಳಿಯಲ್ಲಿ ಸತತ ಎರಡು ದಿನಗಳಿಂದ ನಡೆಯುತ್ತಿರುವ ಕಾಡಾನೆಗಳ ದಾಳಿಯನ್ನು ಹತ್ತಿಕ್ಕಲು ಅರಣ್ಯ ಇಲಾಖೆ ಅಧಿಕಾರಿಗಳು ಇಂದು (ಜೂನ್ 17) ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯ ಮಾಲೂರು ತಾಲೂಕಿನ ಕೋಟಗುತ್ಲ ಹಳ್ಳಿಯ ಹೊರವಲಯದಲ್ಲಿರುವ ಹೊಲಗಳಿಗೆ ಕಳೆದ ಎರಡು ದಿನಗಳಿಂದಲೂ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟು ಮಾಡುತ್ತಿದ್ದವು. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.

The elephants

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅರಣ್ಯದಿಂದ ಈ ಆನೆಗಳು ಬಂದಿವೆಯೆಂದು ಗ್ರಾಮಸ್ಥರು ಹೇಳಿದ್ದಾರೆ. ಇನ್ನು, ಆನೆಗಳ ಈ ದಾಳಿಗೆ ಕೋಸು ಹಾಗೂ ಜೋಳದ ಬೆಳೆ ನಾಶವಾಗಿದೆ.

English summary
The elephants from Tamilnadu's Krishnagiri forest area invaded into agriculture land in Kotaguthla Village of Maluru Taluk in Kolar District and destroyed crops Cabbage and corn.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X